ನವದೆಹಲಿ : ನಾಳೆ ಸಂಜೆ 7:15 ಕ್ಕೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.
ಹೌದು, ಜೂ.9 ರಂದು ನಾಳೆ ಸಂಜೆ 7:15 ಕ್ಕೆ 3 ನೇ ಬಾರಿಗೆ ದೇಶದ ಪ್ರಧಾನಿಯಾಗಿ ‘ನರೇಂದ್ರ ಮೋದಿ’ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.
ರಾಷ್ಟ್ರಪತಿ ಭವನದಲ್ಲಿ ನಾಳೆ ಸಮಾರಂಭ ನಡೆಯಲಿದ್ದು, ಪ್ರಧಾನ ಮಂತ್ರಿ ಹಾಗೂ ಮಂತ್ರಿ ಮಂಡಲದ ಇತರ ಸದಸ್ಯರಿಗೆ ಜೂ.9 ರಂದು ಸಂಜೆ 7:15ಕ್ಕೆ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿಗಳು ಪ್ರಮಾಣವಚನ ಹಾಗೂ ಗೋಪ್ಯತಾ ವಿಧಿ ಬೋಧಿಸಲಿದ್ದಾರೆ. ನರೇಂದ್ರ ಮೋದಿ ಅವರು ನಿನ್ನೆ ರಾಷ್ಟ್ರಪತಿ ಭವನದಲ್ಲಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಎನ್ಡಿಎ ನಾಯಕನಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದರು.3 ನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಮತ್ತೆ ಅಧಿಕಾರದ ಗದ್ದುಗೆ ಏರಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ವಾರಣಾಸಿ ಕ್ಷೇತ್ರದಿಂದ ಹ್ಯಾಟ್ರಿಕ್ ಜಯ ಸಾಧಿಸಿದ್ದಾರೆ.
https://twitter.com/rashtrapatibhvn/status/1799096180137414662?ref_src=twsrc%5Etfw%7Ctwcamp%5Etweetembed%7Ctwterm%5E1799096180137414662%7Ctwgr%5E833627d7aec5d7328e5a35907439319dce21332b%7Ctwcon%5Es1_&ref_url=https%3A%2F%2Fpublictv.in%2Fnarendra-modi-to-take-oath-as-prime-minister-on-29th-of-june-2024-rashtrapathi-bhavan%2F