 ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಇಂದು ಪ್ರಮಾಣ ವಚನ ಸ್ವೀಕರಿಸಿದರು.
ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಇಂದು ಪ್ರಮಾಣ ವಚನ ಸ್ವೀಕರಿಸಿದರು.
ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಿದ್ದರು.ಇಬ್ಬರು ಉಪಮುಖ್ಯಮಂತ್ರಿಗಳಾದ ರಾಜೇಂದ್ರ ಶುಕ್ಲಾ ಮತ್ತು ಜಗದೀಶ್ ದೇವ್ಡಾ ಕೂಡ ಪ್ರಮಾಣ ವಚನ ಸ್ವೀಕರಿಸಿದರು.
ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ 58 ವರ್ಷದ ಯಾದವ್ ಭೋಪಾಲ್ನ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಜನಸಂಘದ ಸ್ಥಾಪಕ ಸದಸ್ಯರಲ್ಲಿ ಒಬ್ಬರಾದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಮತ್ತು ಬಿಜೆಪಿಯ ಸ್ಥಾಪಕ ಸಿದ್ಧಾಂತಿ ಶ್ಯಾಮ್ ಪ್ರಸಾದ್ ಮುಖರ್ಜಿ ಅವರಿಗೆ ಗೌರವ ಸಲ್ಲಿಸಲು ಅವರು ರಾಜ್ಯ ಬಿಜೆಪಿ ಕಚೇರಿಗೆ ಹೋದರು.

 
		 
		 
		 
		 Loading ...
 Loading ... 
		 
		 
		