HomeLatest NewsBREAKING: ಮಂಗಳೂರಿನಲ್ಲಿ ಮುಂದುವರೆದ ನೈತಿಕ ಪೊಲೀಸ್ ಗಿರಿ: ತಂದೆ, ಮಗಳ ಮೇಲೆ ಹಲ್ಲೆ ಆರೋಪ

BREAKING: ಮಂಗಳೂರಿನಲ್ಲಿ ಮುಂದುವರೆದ ನೈತಿಕ ಪೊಲೀಸ್ ಗಿರಿ: ತಂದೆ, ಮಗಳ ಮೇಲೆ ಹಲ್ಲೆ ಆರೋಪ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್ ಗಿರಿ ಮುಂದುವರೆದಿದೆ. ದ್ವಿಚಕ್ರವಾಹನದಲ್ಲಿ ಗೋಮಾಂಸ ಸಾಗಿಸುವಾಗ ತಡೆದು ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದೆ.

ಮಳಲಿ –ನಾರ್ಲಪದವು ಸಮೀಪ ತಂದೆ ಮತ್ತು ಮಗಳ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಮುಲ್ಲರಪಟ್ಟ ನಿವಾಸಿ ಅಬ್ದುಲ್ ಸತ್ತಾರ್ ತಮ್ಮ 11 ವರ್ಷದ ಪುತ್ರಿ ಜತೆಗೆ ಬೈಕ್ ನಲ್ಲಿ ಯಾವುದೇ ದಾಖಲೆ ಇಲ್ಲದೆ ಗೋಮಾಂಸ ಸಾಗಿಸುತ್ತಿದ್ದರು. ಈ ವೇಳೆ ಎಡಪದವು ನಿವಾಸಿಗಳಾದ ಸುಮಿತ್ ಭಂಡಾರಿ(21), ರಜತ್ ನಾಯಕ್(30) ಅವರು ಟಾಟಾ ಸುಮೋ ವಾಹನದಲ್ಲಿ ಬಂದು ಅಬ್ದುಲ್ ಸತ್ತಾರ್ ಅವರ ಬೈಕ್ ಗೆ ಅಡ್ಡಗಟ್ಟಿ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

ನಿಯಂತ್ರಣ ತಪ್ಪಿದ ಬೈಕ್ ಕೆಳಗೆ ಬಿದ್ದಿದ್ದು, ಬಿಸಿಯಾಗಿದ್ದ ಸೈಲೆನ್ಸರ್ ತಾಗಿ ಬಾಲಕಿಯ ಕಾಲಿಗೆ ಸುಟ್ಟ ಗಾಯವಾಗಿದೆ. ಘಟನೆಯ ನಂತರ ಅಬ್ದುಲ್ ಸತ್ತಾರ್ ಬೈಕ್ ಮತ್ತು ಪುತ್ರಿಯನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಸ್ಥಳೀಯರು ಗಾಯಗೊಂಡ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸುಮಿತ್ ಭಂಡಾರಿ, ರಜತ್ ನಾಯಕ ಅವರನ್ನು ಕರೆಸಿ ವಿಚಾರಣೆ ನಡೆಸಲಾಗಿದೆ. ಬಾಲಕಿಯಿಂದ ಹೇಳಿಕೆ ಪಡೆಯಲಾಗಿದೆ. ಯಾವುದೇ ದಾಖಲೆ ಇಲ್ಲದೆ ಗೋಮಾಂಸ ಸಾಗಿಸುತ್ತಿದ್ದ ಹಿನ್ನೆಲೆಯಲ್ಲಿ ಅಬ್ದುಲ್ ಸತ್ತಾರ್ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲು ಮುಂದಾಗಿದ್ದಾರೆ. ನೈತಿಕ ಪೊಲೀಸ್ ಗಿರಿ ನಡೆಸಿದ ಆರೋಪದ ಮೇಲೆ ಸುಮಿತ್ ಭಂಡಾರಿ ಮತ್ತು ರಜತ್ ನಾಯಕ್ ವಿರುದ್ಧವೂ ಕೇಸು ದಾಖಲಿಸಲಾಗುವುದು ಎಂದು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular