ಮಂಡ್ಯ : ಬಿಸಿಯೂಟ ಸೇವಿಸಿ 20 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಮಂಡ್ಯದ ಮದ್ದೂರಿನಲ್ಲಿ ನಡೆದಿದೆ.
ಮದ್ದೂರು ತಾಲೂಕಿನ ಕೆಎಂ ದೊಡ್ಡಿ ಭಾರತಿ ಶಿಕ್ಷಣ ಸಂಸ್ಥೆಯಲ್ಲಿ ಈ ಘಟನೆ ನಡೆದಿದೆ. ನಿನ್ನೆ ಮಧ್ಯಾಹ್ನ ಶಾಲೆಯಲ್ಲಿ ಬಿಸಿಯೂಟ ಸೇವಿಸಿದ್ದ 20 ಕ್ಕೂ ಹೆಚ್ಚುಮಕ್ಕಳಿಗೆ ಇಂದು ಬೆಳಗ್ಗೆ ವಾಂತಿ ಭೇದಿ ಕಾಣಿಸಿಕೊಂಡಿದೆ. ಕೂಡಲೇ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಮಂಡ್ಯದ ಮಿಮ್ಸ್ ಸೇರಿ ಹಲವು ಆಸ್ಪತ್ರೆಗಳಲ್ಲಿ ವಿದ್ಯಾರ್ಥಿಗಳಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ.
You Might Also Like
TAGGED:ಮಂಡ್ಯ