ತುಮಕೂರು : ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಅದಲೆಗೆರೆಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡವರನ್ನು ವಿರೂಪಾಕ್ಷಿಪುರದ ಪ್ರೇಮಕುಮಾರಿ (50) ಪೂರ್ಣಿಮಾ (30) ಎಂದು ಗುರುತಿಸಲಾಗಿದೆ.
ಮಾನಸಿಕ ಖಿನ್ನತೆಗೊಳಗಾಗಿ ತಾಯಿ- ಮಗಳಿಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಚೇಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.