ಬೆಂಗಳೂರು: ಬೆಂಗಳೂರಿನಲ್ಲಿ ಮಗುವಿಗೆ ವಿಷ ಕುಡಿಸಿ ತಾಯಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಒಂದು ವರ್ಷ ಎಂಟು ತಿಂಗಳ ಮಗು ಚಾರ್ವಿ ಸಾವನ್ನಪ್ಪಿದ್ದು, ತಾಯಿ ಚಂದ್ರಿಕಾ(26) ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ತಿಗಳರ ಪಾಳ್ಯದಲ್ಲಿ ಘಟನೆ ನಡೆದಿದೆ. ಟೀ ಗೆ ಇಲಿ ಪಾಷಾಣ ಬೆರೆಸಿ ಮಗುವಿಗೆ ಕುಡಿಸಿ ತಾನು ಕುಡಿದ ತಾಯಿ ಆತ್ಮಹತ್ಯಗೆ ಯತ್ನಿಸಿದ್ದಾರೆ. ಪತಿ ಯೋಗೀಶ್ ಜೊತೆಗೆ ಗಲಾಟೆಯಿಂದ ಸಾಯುವ ನಿರ್ಧಾರ ಕೈಗೊಂಡು ಕೃತ್ಯವೆಸಗಿದ್ದಾರೆ. ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.