ಮೈಸೂರು: ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ. ಕೋಟೆ ತಾಲೂಕಿನ ಹೆಚ್.ಮಠದ ಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ಕೌಟುಂಬಿಕ ಕಲಹದಿಂದ ನೇಣು ಬಿಗಿದುಕೊಂಡು ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೇಮಲತಾ(38), ಮಕ್ಕಳಾದ ಅನು(13) ಹಾಗೂ ಚೇತನ(15) ಮೃತಪಟ್ಟವರು ಎಂದು ಹೇಳಲಾಗಿದೆ. ಪಿರಿಯಾಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

