HomeKarnatakaBREAKING : ವೈದ್ಯರ ನಿರ್ಲಕ್ಷ್ಯ ಆರೋಪ : ಕಲಬುರಗಿ ಖಾಸಗಿ ಆಸ್ಪತ್ರೆಯಲ್ಲಿ ಬಾಣಂತಿ, ನವಜಾತ ಶಿಶು...

BREAKING : ವೈದ್ಯರ ನಿರ್ಲಕ್ಷ್ಯ ಆರೋಪ : ಕಲಬುರಗಿ ಖಾಸಗಿ ಆಸ್ಪತ್ರೆಯಲ್ಲಿ ಬಾಣಂತಿ, ನವಜಾತ ಶಿಶು ಸಾವು.!

ಕಲಬುರಗಿ : ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಬಾಣಂತಿ, ನವಜಾತ ಶಿಶು ಮೃತಪಟ್ಟ ಘಟನೆ ನಡೆದಿದೆ.

ಎಮ್ ಎಸ್ ಕೆ ಮಿಲ್ ಬಡಾವಣೆಯ ಖಾಸಗಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಸಭಾ ಪರ್ವಿನ್ ಎಂಬ ಗರ್ಭಿಣಿ ಮಹಿಳೆಯನ್ನು ಕುಟುಂಬದವರು ನಿನ್ನೆ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಇಂದು ಮಗು ಹಾಗೂ ತಾಯಿ ಮೃತಪಟ್ಟಿದೆ.

ವೈದ್ಯರ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿ ಆಸ್ಪತ್ರೆ ಕಿಟಕಿ, ಬಾಗಿಲಿನ ಗಾಜು ಧ್ವಂಸಗೊಳಿಸಿದ್ದಾರೆ. ಹೆರಿಗೆ ಮಾಡಿಸುವ ಮುನ್ನವೇ ತಾಯಿ ಮಗು ಮೃತಪಟ್ಟಿದೆ ಎಂದು ವೈದ್ಯರು ಹೇಳಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular