HomeKarnatakaBREAKING : CM ಸಿದ್ದರಾಮಯ್ಯ ವಿರುದ್ಧ 'ಮುಡಾ' ಹಗರಣ : ನಾಳೆ ಮಧ್ಯಾಹ್ನ 12 ಗಂಟೆಗೆ...

BREAKING : CM ಸಿದ್ದರಾಮಯ್ಯ ವಿರುದ್ಧ ‘ಮುಡಾ’ ಹಗರಣ : ನಾಳೆ ಮಧ್ಯಾಹ್ನ 12 ಗಂಟೆಗೆ ಹೈಕೋರ್ಟ್’ ನಲ್ಲಿ ಮಹತ್ವದ ತೀರ್ಪು ಪ್ರಕಟ

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ನಾಳೆ ಸಿಎಂ ಸಿದ್ದರಾಮಯ್ಯ ಭವಿಷ್ಯ ನಿರ್ಧಾರವಾಗಲಿದ್ದು, ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಲಿದೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ನಾಳೆ ಮಧ್ಯಾಹ್ನ 12 ಗಂಟೆಗೆ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಪೀಠ ಮಹತ್ವದ ತೀರ್ಪು ಪ್ರಕಟಿಸಲಿದೆ. ಈ ಮೂಲಕ ನಾಳೆ ಸಿಎಂ ಸಿದ್ದರಾಮಯ್ಯ ಭವಿಷ್ಯ ನಿರ್ಧಾರವಾಗಲಿದೆ.

ಮುಡಾ ಪ್ರಕರಣದ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ನೀಡಿರುವ ಅನುಮತಿ ರದ್ದು ಮಾಡುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿರುವ ಅರ್ಜಿ ಸಂಬಂಧ ಆದೇಶ ಕಾಯ್ದಿರಿಸಿದ್ದು, ನಾಳೆ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದರು.ಟಿ.ಜೆ.ಅಬ್ರಾಹಂ ನೀಡಿದ್ದ ದೂರಿಗೆ ಸಂಬಂಧಿಸಿದಂತೆ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದರು.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾದಲ್ಲಿ ನಡೆದಿದೆ ಎನ್ನಲಾದ ನಿವೇಶನ ಹಂಚಿಕೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಇತ್ತೀಚೆಗೆ ದೂರು ದಾಖಲಾಗಿತ್ತು.ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಎಂಬುವವರು ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನಸ್ವಾಮಿ, ಭೂ ಮಾಲೀಕ ದೇವರಾಜು ಹಾಗೂ ಕುಟುಂಬದ ವಿರುದ್ಧ ದೂರು ದಾಖಲಿಸಿದ್ದರು. ನಕಲಿ ದಾಖಲೆಗಳನ್ನು ಸೃಷ್ಟಿಸಿ ಮೂಡಾಗೆ ವಂಚಿಸಿದ್ದಾರೆ ಎಂದು ದೂರಿದ್ದರು. ಬಳಿಕ ಈ ವಿಚಾರ ಭಾರಿ ಸುದ್ದಿಯಾಗಿತ್ತು. ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದರು.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular