BREAKING : ಮುಡಾ ಹಗರಣ : ಸತತ 2 ಗಂಟೆ ಲೋಕಾಯುಕ್ತ ವಿಚಾರಣೆ ಎದುರಿಸಿದ CM ಸಿದ್ದರಾಮಯ್ಯ.!

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಇಂದು ಸತತ 2 ಗಂಟೆ ಲೋಕಾಯುಕ್ತ ವಿಚಾರಣೆ ನಡೆಸಿದ್ದಾರೆ.

ಲೋಕಾಯುಕ್ತ ವಿಚಾರಣೆ ಅಂತ್ಯಗೊಂಡಿದ್ದು, ವಿಚಾರಣೆ ಮುಗಿಸಿ ಸಿಎಂ ಸಿದ್ದರಾಮಯ್ಯ ಮೈಸೂರಿನ ಅತಿಥಿ ಗೃಹಕ್ಕೆ ತೆರಳಿದ್ದಾರೆ.

ಪ್ರಕರಣದ ಎ-1 ಆರೋಪಿ ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತ ಅಧಿಕಾರಿಗಳು ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ.ಇಂದು ಬೆಳಿಗ್ಗೆ 10 ಗಂಟೆಗೆ ಸಿಎಂ ಸಿದ್ದರಾಮಯ್ಯ ಮೈಸೂರು ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದರು .ಲೋಕಾಯುಕ್ತ ಎಸ್ ಪಿ ಉದೇಶ್ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಸತತ 2 ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿದೆ. ಮೊದಲು ಆಧಾರ್ ಕಾರ್ಡ್ ತೋರಿಸಿದ ಬಳಿಕ ಅವರಿಗೆ ಪ್ರಶ್ನೆಗಳನ್ನು ಕೇಳಲಾಯಿತು.

ಇನ್ನೂ ಸಿಎಂ ಸಿದ್ದರಾಮಯ್ಯ ರಾಜೀನಾಮಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ನಡೆಸಿದೆ. ಸಿಎಂ ಸಿದ್ದರಾಮಯ್ಯ-ಲೋಕಾಯುಕ್ತ ನಡುವೆ ಮ್ಯಾಚ್ ಫಿಕ್ಸಿಂಗ್ ಆಗಿದೆ. ಸಿಎಂ ಸಿದ್ದರಾಮಯ್ಯ ಅವರೇ ಪ್ರಶ್ನೆಗಳನ್ನು ಕೊಟ್ಟು ಅವರೇ ಉತ್ತರ ನೀಡಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read