HomeLatest NewsBREAKING: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 'ಡೆವಿಲ್' ಬಿಡುಗಡೆಗೆ ಮುಹೂರ್ತ ಫಿಕ್ಸ್: ಲಿರಿಕಲ್ ಸಾಂಗ್ ರಿಲೀಸ್

BREAKING: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಡೆವಿಲ್’ ಬಿಡುಗಡೆಗೆ ಮುಹೂರ್ತ ಫಿಕ್ಸ್: ಲಿರಿಕಲ್ ಸಾಂಗ್ ರಿಲೀಸ್

ಬೆಂಗಳೂರು: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಡೆವಿಲ್’ ಸಿನಿಮಾ ಬಿಡುಗಡೆಗೆ ಮುಹೂರ್ತ ನಿಗದಿಯಾಗಿದೆ. ಡಿಸೆಂಬರ್ 12ರಂದು ‘ಡೆವಿಲ್’ ತೆರೆ ಕಾಣಲಿದೆ.

“ನಲ್ಮೆಯ ಸೆಲೆಬ್ರಿಟೀಸ್, ನಿಮ್ಮ ನಿರಂತರ ಪ್ರಾರ್ಥನೆ, ಪ್ರೀತಿ ಮತ್ತು ಬೆಂಬಲಕ್ಕೆ ಅನಂತ ಧನ್ಯವಾದಗಳು. ನೀವು ಕಾತುರದಿಂದ ಕಾಯುತ್ತಿದ್ದ TheDevil ಡಿಸೆಂಬರ್ 12 ರಂದು ಬಿಡುಗಡೆಯಾಗಲಿದೆ” ಎಂದು ತಿಳಿಸಲಾಗಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಅವರ ಪರವಾಗಿ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರು ಜಾಲತಾಣ ಖಾತೆ ನಿರ್ವಹಿಸುತ್ತಿದ್ದು, ಅಭಿಮಾನಿಗಳೊಂದಿಗೆ ಸಂಪರ್ಕದಲ್ಲಿದ್ದಾರೆ. ‘ಡೆವಿಲ್’ ಚಿತ್ರದ ಬಗ್ಗೆ ಅಪ್ಡೇಟ್ ನೀಡಿದ್ದು, ಬಿಡುಗಡೆ ದಿನಾಂಕದ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

‘ಡೆವಿಲ್’ ಚಿತ್ರದ ‘ಇದ್ರೆ ನೆಮ್ದಿಯಾಗ್ ಇರಬೇಕು’ ಲಿರಿಕಲ್ ಸಾಂಗ್ ಕೂಡ ಬಿಡುಗಡೆಯಾಗಿದ್ದು, ಬಿಡುಗಡೆಯಾದ ಬೆನ್ನಲ್ಲೇ ಭಾರೀ ಮೆಚ್ಚುಗೆ ಪಡೆದುಕೊಂಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular