HomeKarnatakaBREAKING : ವಿಶ್ವವಿಖ್ಯಾತ 'ಬೆಂಗಳೂರು ಕರಗ' ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್ |Bengaluru Karaga 2025

BREAKING : ವಿಶ್ವವಿಖ್ಯಾತ ‘ಬೆಂಗಳೂರು ಕರಗ’ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್ |Bengaluru Karaga 2025

ಬೆಂಗಳೂರು : ಈ ಬಾರಿಯ ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಏಪ್ರಿಲ್ 4 ರಿಂದ 14 ರವರೆಗೆ ಬೆಂಗಳೂರು ಕರಗ ಮಹೋತ್ಸವ ನಡೆಯಲಿದೆ.

ಈ ಬಾರಿಯ ಐತಿಹಾಸಿಕ ಬೆಂಗಳೂರು ಕರಗ ಶಕ್ತ್ಯೋತ್ಸವ ಚೈತ್ರ ಪೂರ್ಣಿಮೆ ದಿನ ನಡೆಯಲಿದೆ.
ಏಪ್ರಿಲ್ 4 ರಿಂದ ಉತ್ಸವ ಆರಂಭವಾಗಿ ಏಪ್ರಿಲ್ 14 ರವರೆಗೆ ನಡೆಯಲಿದ್ದು, ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶ್ರೀ ಧರ್ಮರಾಯಸ್ವಾಮಿ ಕರಗ ವಿಜೃಂಭಣೆಯಿಂದ ನಡೆಯಲಿದೆ.

ಈ ಬಾರಿಯೂ ಕರಗವನ್ನು ತಿಗಳ ಸಮುದಾಯದ ಅರ್ಚಕ ವಿ.ಜ್ಞಾನೇಂದ್ರ ಅವರು ಹೊರಲಿದ್ದಾರೆ. ಕಳೆದ 12 ವರ್ಷಗಳಿಂದ ಜ್ಞಾನೇಂದ್ರ ಅವರು ಕರಗ ಹೊರುತ್ತಿದ್ದಾರೆ. ಒಟ್ಟಾರೆ ಏ.4 ರಂದು ಧ್ವಜಾರೋಹಣ, ಪೂಜಾ ವಿಧಿವಿಧಾನದ ಮೂಲಕ ಅರಂಭವಾಗುವ ಕರಗ ಏ.14ರವರೆಗೆ ಜರುಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular