HomeKarnatakaBREAKING: ದಂಪತಿಯನ್ನು ಕೊಂದ ಹಂತಕನಿಗೆ ಜೀವಾವಧಿ ಶಿಕ್ಷೆ

BREAKING: ದಂಪತಿಯನ್ನು ಕೊಂದ ಹಂತಕನಿಗೆ ಜೀವಾವಧಿ ಶಿಕ್ಷೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಮುಲ್ಕಿ ತಾಲೂಕಿನ ಏಳಿಂಜೆ ಗ್ರಾಮದ ಮುತ್ತಯ್ಯಕೆರೆ ಅಗಿಂದಕಾಡು ಬಳಿ ನಡೆದ ನಡೆದಿದ್ದ ದಂಪತಿ ಕೊಲೆ ಪ್ರಕರಣದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆಲ್ಫೋನ್ಸ್ ಸಾಲ್ದಾನ ಎಂಬಾತನಿಗೆ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಸೋಮವಾರ ಜೀವಾವಧಿ ಶಿಕ್ಷೆ ವಿಧಿಸಿದೆ.

2020ರ ಏಪ್ರಿಲ್ 29ರಂದು ಆಲ್ಫೋನ್ಸ್ ಸಾಲ್ಟಾನ ಮನೆಯ ಬಳಿಯ ವಿನ್ಸೆಂಟ್ ಡಿಸೋಜಾ ಮತ್ತು ಅವರ ಪತ್ನಿ ಹೆಲೆನ್ ಡಿಸೋಜಾ ಅವರನ್ನು ಕೊಲೆ ಮಾಡಿದ್ದ. ಮುಲ್ಕಿ ಪೊಲೀಸ್ ಠಾಣೆಯ ಅಂದಿನ ನಿರೀಕ್ಷಕ ಜಯರಾಮ ಡಿ. ಗೌಡ ಪ್ರಕರಣದ ತನಿಖೆ ನಡೆಸಿ ಕೋರ್ಟ್ ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಇಂದು ಎರಡನೆಯ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ಅವರು ಜೀವಾವಧಿ ಶಿಕ್ಷೆ ಹಾಗೂ ಎರಡು ಲಕ್ಷ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರಿ ಅಭಿಯೋಜಕರಾದ ಜುಡಿತ್ ಓಲ್ಗಾ ಮಾರ್ಗರೇಟ್ ವಾದ ಮಂಡಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular