HomeKarnatakaBREAKING : ಸಂಗೀತ ನಿರ್ದೇಶಕ ಹಂಸಲೇಖರಿಂದ ಈ ಬಾರಿ ದಸರಾ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ...

BREAKING : ಸಂಗೀತ ನಿರ್ದೇಶಕ ಹಂಸಲೇಖರಿಂದ ಈ ಬಾರಿ ದಸರಾ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಘೋಷಣೆ

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇದ್ದು, ಈ ಬಾರಿಯ ದಸರಾ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲು ಸರ್ಕಾರ ನಿರ್ಧರಿಸಿದೆ.

ಈ ಬಾರಿ ದಸರಾ ಯಾರು ಉದ್ಘಾಟನೆ ಮಾಡಲಿದ್ದಾರೆ? ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದ್ದು, ಸಂಗೀತ ನಿರ್ದೇಶಕ ಹಂಸಲೇಖ ಅವರು ಈ ಬಾರಿಯ ದಸರಾ ಮಹೋತ್ಸವ ಉದ್ಘಾಟಿಸಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಈ ಬಾರಿ ದಸರಾ ಮಹೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಈ ಬಾರಿಯ ದಸರಾ ಉದ್ಘಾಟನೆಯನ್ನು ಸಂಗೀತ ನಿರ್ದೇಶಕ ಹಂಸಲೇಖ ನೆರವೇರಸಲಿದ್ದಾರೆ ಎಂದು ತಿಳಿಸಿದ್ದಾರೆ.

ಮೈಸೂರು ದಸರಾ ಹಬ್ಬಕ್ಕೆ ದಿನಾಂಕ 15.10.2023 ಬೆಳಿಗ್ಗೆ 10.15 ರಿಂದ 10.30 ಕ್ಕೆ ಸಲ್ಲುವ ಮಹೂರ್ತದಲ್ಲಿ ಉದ್ಘಾಟನೆ ನೆರವೇರಲಿದ್ದು, ಪಂಜಿನ ಕವಾಯತು ವಿಜಯದಶಮಿ ದಿನದಂದು ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು, ಚಲನಚಿತ್ರೋತ್ಸವ, ರೈತರ ದಸರಾ, ಯುವ ದಸರಾ ಎಲ್ಲವನ್ನು ವ್ಯವಸ್ಥಿತವಾಗಿ ಆಚರಿಸಲು ರಾಜ್ಯ ಸರ್ಕಾರ ತೀರ್ಮಾನಿಸಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular