BREAKING : ನನ್ನ ಪತ್ನಿ ಮನನೊಂದು ‘ಮುಡಾ’ ಗೆ ಸೈಟ್ ವಾಪಸ್ ಕೊಟ್ಟಿದ್ದಾರೆ : CM ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್..!

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಸೈಟ್ ವಾಪಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ‘ನನ್ನ ಪತ್ನಿ  ಪಾರ್ವತಿ  ಮನನೊಂದು ‘ಮುಡಾ’ ಸೈಟ್ ವಾಪಸ್ ಕೊಟ್ಟಿದ್ದಾರೆ. ಈ ಬಗ್ಗೆ ಪತ್ನಿ ನನ್ನ ಜೊತೆ ಚರ್ಚಿಸಿರಲಿಲ್ಲ, ಸ್ವತಂತ್ರ ನಿರ್ಧಾರ ಕೈಗೊಂಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮನನೊಂದು ನನ್ನ ಪತ್ನಿ ಸೈಟ್ ಹಿಂತಿರುಗಿಸಿದ್ದಾರೆ. ನಾನು ಯಾವುದೇ ತಪ್ಪು ಮಾಡಿಲ್ಲ, ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಲ್ಲ ಎಂದರು.ಕಾನೂನು ರೀತಿ ಏನು  ಮಾಡಬೇಕೋ ಅದನ್ನು ಮಾಡಲಿ , ನಾನು ಎಲ್ಲವನ್ನು ಎದುರಿಸುತ್ತೇನೆ ಎಂದು ಹೇಳಿದರು.

ಪತ್ನಿ ಮುಡಾ ನೀಡಿರುವ 14 ನಿವೇಶನಗಳನ್ನು ಹಿಂದಿರುಗಿಸುವ ನಿರ್ಧಾರ ಕೈಗೊಂಡು, ನನಗೂ ಆಶ್ಚರ್ಯ ಉಂಟು ಮಾಡಿದ್ದಾರೆ. ನನ್ನ ನಾಲ್ಕು ದಶಕಗಳ ಸುದೀರ್ಘ ರಾಜಕಾರಣದಲ್ಲಿ ಎಂದೂ ಕೂಡಾ ಮಧ್ಯೆಪ್ರವೇಶಿಸದೆ ಕುಟುಂಬಕ್ಕಷ್ಟೆ ಸೀಮಿತವಾಗಿದ್ದ ನನ್ನ ಪತ್ನಿ ನನ್ನ ವಿರುದ್ಧದ ದ್ವೇಷದ ರಾಜಕಾರಣಕ್ಕೆ ಬಲಿಯಾಗಿ ಮಾನಸಿಕವಾಗಿ ಹಿಂಸೆ ಅನುಭವಿಸುವಂತಾಗಿರುವುದಕ್ಕೆ ನನಗೆ ವಿಷಾದ ಇದೆ. ಹೀಗಿದ್ದರೂ ನಿವೇಶನಗಳನ್ನು ಹಿಂದಿರುಗಿಸಿದ ನನ್ನ ಪತ್ನಿಯ ನಿರ್ಧಾರವನ್ನು ನಾನು ಗೌರವಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read