HomeLatest NewsBREAKING : ಇಂದಿನಿಂದಲೇ ನಾಗರಹೊಳೆ, ಬಂಡೀಪುರ ಸಫಾರಿ, ಚಾರಣ ಬಂದ್ : ಹುಲಿ ಸೆರೆ ಹಿಡಿಯಲು...

BREAKING : ಇಂದಿನಿಂದಲೇ ನಾಗರಹೊಳೆ, ಬಂಡೀಪುರ ಸಫಾರಿ, ಚಾರಣ ಬಂದ್ : ಹುಲಿ ಸೆರೆ ಹಿಡಿಯಲು ಸಚಿವ ‘ಈಶ್ವರ್ ಖಂಡ್ರೆ’ಸೂಚನೆ

ಚಾಮರಾಜನಗರ : ನಾಗರಹೊಳೆ ಮತ್ತು ಬಂಡೀಪುರ ಸಫಾರಿ ಹಾಗೂ ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಚಾರಣವನ್ನು ಇಂದಿನಿಂದಲೇ ಬಂದ್ ಮಾಡಿ ಹುಲಿ ಸೆರೆ ಕಾರ್ಯಾಚರಣೆಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.

ಹೆಗ್ಗೋಡಿಲು ಗ್ರಾಮದ ಬಳಿ ಹುಲಿ ದಾಳಿಗೆ ರೈತ ಬಲಿಯಾದ ಹಿನ್ನೆಲೆ ಹುಲಿ ಸೆರೆ ಹಿಡಿಯಲು ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.

ಮುಂದಿನ ಆದೇಶದವರೆಗೆ ಎರಡೂ ಕಡೆ ಸಫಾರಿ ಬಂದ್ ಮಾಡಿ, ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಹುಲಿ ಸೆರೆ ಕಾರ್ಯಾಚರಣೆ ಬಳಸಿಕೊಳ್ಳುವಂತೆ ಸೂಚನೆ ನೀಡಿದ್ದಾರೆ.ಮುಂದಿನ ಆದೇಶದವರೆಗೆ ಇಂದಿನಿಂದಲೇ ನಾಗರಹೊಳೆ ಮತ್ತು ಬಂಡೀಪುರದಲ್ಲಿ ಸಫಾರಿ ಬಂದ್ ಮಾಡಲು ಮತ್ತು ಮಾನವ-ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಟ್ರಕ್ಕಿಂಗ್ ಸ್ಥಗಿತಗೊಳಿಸಲು ಹಾಗೂ ಬಂಡೀಪುರ, ನಾಗರಹೊಳೆ ಸಫಾರಿಯ ಕಾರ್ಯದಲ್ಲಿ ನಿಯೋಜನೆಗೊಂಡಿರುವ ಎಲ್ಲ ಅಧಿಕಾರಿಗಳು ಮತ್ತು ವಾಹನ ಚಾಲಕರ ಸಹಿತ ಎಲ್ಲ ಸಿಬ್ಬಂದಿ ಹುಲಿ ಸೆರೆ ಕಾರ್ಯಾಚರಣೆಗೆ ನಿಯೋಜನೆ ಮಾಡಲು ಸೂಚನೆ ನೀಡಿದ್ದಾರೆ. ವನ್ಯಜೀವಿ ವಿಭಾಗದ ಎಪಿಸಿಸಿಎಫ್ ಮತ್ತು ಹುಲಿ ಯೋಜನೆಯ ನಿರ್ದೇಶಕರು ಸ್ಥಳದಲ್ಲೇ ಇದ್ದು ಹುಲಿಯನ್ನು ಹಿಡಿಯಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular