HomeKarnatakaBREAKING : ನಟ ದುನಿಯಾ ವಿಜಯ್‌-ನಾಗರತ್ನ ದಾಂಪತ್ಯ ಅಂತ್ಯ; ವಿಚ್ಛೇದನ ಮಂಜೂರು, ₹2 ಕೋಟಿ ಜೀವನಾಂಶ...

BREAKING : ನಟ ದುನಿಯಾ ವಿಜಯ್‌-ನಾಗರತ್ನ ದಾಂಪತ್ಯ ಅಂತ್ಯ; ವಿಚ್ಛೇದನ ಮಂಜೂರು, ₹2 ಕೋಟಿ ಜೀವನಾಂಶ ನೀಡಲು ಹೈಕೋರ್ಟ್‌ ಆದೇಶ

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ದುನಿಯಾ ವಿಜಯ್‌ ಹಾಗೂ ಅವರ ಪತ್ನಿ ನಾಗರತ್ನ ಅವರ ದಾಂಪತ್ಯ ಜೀವನಕ್ಕೆ ಕಾನೂನುಬದ್ಧವಾಗಿ ಅಂತ್ಯವಾಗಿದೆ. ಇಬ್ಬರಿಗೂ ವಿಚ್ಛೇದನ ಮಂಜೂರು ಮಾಡಿರುವ ಹೈಕೋರ್ಟ್‌ ವಿಭಾಗೀಯ ಪೀಠ, ನಾಗರತ್ನ ಅವರಿಗೆ ₹2 ಕೋಟಿ ಜೀವನಾಂಶ ನೀಡುವಂತೆ ಆದೇಶಿಸಿದೆ.

ಹೌದು. ಸ್ಯಾಂಡಲ್‌ವುಡ್‌ ನಟ ದುನಿಯಾ ವಿಜಯ್‌ ಹಾಗೂ ಅವರ ಪತ್ನಿ ನಾಗರತ್ನ ಅವರ ಸುದೀರ್ಘ ದಾಂಪತ್ಯ ಜೀವನಕ್ಕೆ ಕೊನೆಗೂ ಅಧಿಕೃತ ತೆರೆ ಬಿದ್ದಿದೆ. ಇಬ್ಬರ ವಿಚ್ಛೇದನ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್‌ ವಿಭಾಗೀಯ ಪೀಠವು ವಿಚ್ಛೇದನ ಮಂಜೂರು ಮಾಡಿ ಮಹತ್ವದ ಆದೇಶ ಹೊರಡಿಸಿದೆ.

ವಿಚ್ಛೇದನ ಮಂಜೂರು ಮಾಡುವುದರ ಜೊತೆಗೆ, ನಾಗರತ್ನ ಅವರಿಗೆ ₹2 ಕೋಟಿ ಜೀವನಾಂಶ ಪಾವತಿಸುವಂತೆ ದುನಿಯಾ ವಿಜಯ್‌ ಅವರಿಗೆ ಹೈಕೋರ್ಟ್‌ ನಿರ್ದೇಶನ ನೀಡಿದೆ. ನ್ಯಾಯಮೂರ್ತಿ ಡಿ.ಕೆ ಸಿಂಗ್ ಹಾಗೂ ನ್ಯಾಯಮೂರ್ತಿ ಶಾಂತಿಭೂಷಣ್ ಅವರನ್ನೊಳಗೊಂಡ ಹೈಕೋರ್ಟ್ ವಿಭಾಗೀಯ ಪೀಠ ಈ ತೀರ್ಪು ನೀಡಿದೆ. 2 ಕೋಟಿ ರೂ ಖಾಯಂ ಜೀವನಾಂಶ ನೀಡುವಂತೆ ಆದೇಶ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 ಆರ್ಥಿಕ ಸ್ಥಿತಿ, ಸ್ಥಾನಮಾನ ಪರಿಗಣಿಸಿದ ಕೋರ್ಟ್‌

ಇಬ್ಬರ ಹಣಕಾಸಿನ ಸ್ಥಿತಿ, ದುನಿಯಾ ವಿಜಯ್‌ ಅವರ ಸಾಮಾಜಿಕ ಹಾಗೂ ವೃತ್ತಿಪರ ಸ್ಥಾನಮಾನ ಸೇರಿದಂತೆ ಹಲವು ಅಂಶಗಳನ್ನು ಪರಿಗಣಿಸಿ ಜೀವನಾಂಶದ ಮೊತ್ತವನ್ನು ನ್ಯಾಯಪೀಠ ನಿಗದಿಪಡಿಸಿದೆ ಎಂದು ವರದಿಯಾಗಿದೆ. ಅಲ್ಲದೆ, ದಂಪತಿಗೆ ಇರುವ ಮೂವರು ಮಕ್ಕಳ ಜವಾಬ್ದಾರಿಯನ್ನೂ ಗಮನದಲ್ಲಿಟ್ಟುಕೊಂಡು ಕೋರ್ಟ್‌ ಈ ಆದೇಶ ನೀಡಿದೆ.

ಹಲವು ವರ್ಷಗಳ ಕಾನೂನು ಹೋರಾಟಕ್ಕೆ ತೆರೆ

ದುನಿಯಾ ವಿಜಯ್‌ ಹಾಗೂ ನಾಗರತ್ನ ಅವರ ದಾಂಪತ್ಯದಲ್ಲಿ ಹಲವು ವರ್ಷಗಳಿಂದ ಭಿನ್ನಾಭಿಪ್ರಾಯ ಉಂಟಾಗಿತ್ತು. ಈ ಸಂಬಂಧ ಇಬ್ಬರ ನಡುವೆ ನಡೆದಿದ್ದ ಸುದೀರ್ಘ ಕಾನೂನು ಹೋರಾಟ ಇದೀಗ ಹೈಕೋರ್ಟ್‌ ಆದೇಶದೊಂದಿಗೆ ಅಂತ್ಯಗೊಂಡಿದೆ.ಈ ಹಿಂದೆ 2024ರಲ್ಲಿ ದುನಿಯಾ ವಿಜಯ್‌ ಸಲ್ಲಿಸಿದ್ದ ವಿಚ್ಛೇದನ ಅರ್ಜಿಯನ್ನು ಕೌಟುಂಬಿಕ ನ್ಯಾಯಾಲಯ ವಜಾಗೊಳಿಸಿತ್ತು. ಬಳಿಕ ಪ್ರಕರಣ ಹೈಕೋರ್ಟ್‌ ಮೆಟ್ಟಿಲೇರಿತ್ತು.

ಇದೀಗ ಹೈಕೋರ್ಟ್‌ ವಿಭಾಗೀಯ ಪೀಠವು ವಿಚ್ಛೇದನಕ್ಕೆ ಅನುಮತಿ ನೀಡಿದ್ದು, ನಾಗರತ್ನ ಅವರಿಗೆ ₹2 ಕೋಟಿ ಜೀವನಾಂಶ ನೀಡುವಂತೆ ಆದೇಶಿಸಿರುವುದು ಪ್ರಕರಣದ ಪ್ರಮುಖ ಬೆಳವಣಿಗೆಯಾಗಿದೆ.ನಟ ದುನಿಯಾ ವಿಜಯ್‌ ಹಾಗೂ ನಾಗರತ್ನ ಅವರ ವೈವಾಹಿಕ ಜೀವನ ಹಲವು ವರ್ಷಗಳಿಂದ ಕಾನೂನು ಹೋರಾಟದ ಹಂತದಲ್ಲಿತ್ತು. ಇದೀಗ ಹೈಕೋರ್ಟ್‌ ತೀರ್ಪಿನೊಂದಿಗೆ ಇಬ್ಬರ ದಾಂಪತ್ಯ ಸಂಬಂಧಕ್ಕೆ ಅಧಿಕೃತ ಅಂತ್ಯ ಸಿಕ್ಕಂತಾಗಿದೆ.

ವಿಚ್ಛೇದನ ಮಂಜೂರು ಜೊತೆಗೆ ₹2 ಕೋಟಿ ಜೀವನಾಂಶ ನೀಡುವಂತೆ ಹೈಕೋರ್ಟ್‌ ವಿಭಾಗೀಯ ಪೀಠ ನೀಡಿರುವ ಆದೇಶ ಇದೀಗ ಗಮನ ಸೆಳೆದಿದೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular