ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಆಪ್ತನಿಗೂ ನೋಟಿಸ್ ನೀಡಲಾಗಿದೆ. ಮಂಗಳೂರಿನ ಕಾಂಗ್ರೆಸ್ ಮುಖಂಡ ಇನಾಯತ್ ಅಲಿ ಅವರಿಗೆ ನೋಟಿಸ್ ನೀಡಲಾಗಿದೆ.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಮಂಗಳೂರು ಉತ್ತರ ಕ್ಷೇತ್ರದ ಪರಾಜಿತ ಅಭ್ಯರ್ಥಿ ಇನಾಯತ್ ಅಲಿ ಅವರಿಗೆ ದೆಹಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗದಿಂದ ನೋಟಿಸ್ ನೀಡಲಾಗಿದೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಇಡಿ ನೀಡಿದ ದೂರಿನ ಮೇರೆಗೆ ದೆಹಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗ ಸೋನಿಯಾ ಮತ್ತು ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿತ್ತು. ಇದೇ ಪ್ರಕರಣದಲ್ಲಿ ಡಿಕೆ ಸಹೋದರರಿಗೆ ನೋಟಿಸ್ ಜಾರಿಯಾಗಿತ್ತು.
ಒಂದು ವಾರದಲ್ಲಿ ತನಿಖೆಗೆ ಹಾಜರಾಗುವಂತೆ ಡಿಕೆ ಆಪ್ತ ಇನಾಯತ್ ಗೆ ನೋಟಿಸ್ ನೀಡಲಾಗಿದೆ. ವಿನಾಯತ್ ಅವರ ಮನೆಗೆ ಬಂದು ದೆಹಲಿ ಪೊಲೀಸರು ನೋಟಿಸ್ ನೀಡಿದ್ದಾರೆ. ಪ್ರಕರಣ ಸಂಬಂಧ ಹಲವು ವರ್ಷಗಳಿಂದ ಇನಾಯತ್ ವಿಚಾರಣೆ ನಡೆದಿತ್ತು. ಮುಂದುವರಿದ ಭಾಗವಾಗಿ ದೆಹಲಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ನ್ಯಾಷನಲ್ ಹೆರಾಲ್ಡ್ ಸಂಸ್ಥೆಗೆ ಇನಾಯತ್ ಸಹ ಹಣ ನೀಡಿದ್ದಾರೆ ಎಂಬ ಮಾಹಿತಿ ಗೊತ್ತಾಗಿದೆ. ದೇಣಿಗೆ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.
