HomeLatest NewsBREAKING: ಕೆಐಎಬಿಯಲ್ಲಿ NCB ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ಬರೋಬ್ಬರಿ 50 ಕೋಟಿ ರೂ. ಮೌಲ್ಯದ ಡ್ರಗ್ಸ್...

BREAKING: ಕೆಐಎಬಿಯಲ್ಲಿ NCB ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ಬರೋಬ್ಬರಿ 50 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ(ಕೆಐಎಬಿ)ಯಲ್ಲಿ ಬರೋಬ್ಬರಿ 50 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದೆ.

ಬೆಂಗಳೂರು ವಲಯದ ಎನ್.ಸಿ.ಬಿ. ಅಧಿಕಾರಿಗಳಿಂದ ಕಾರ್ಯಾಚರಣೆ ನಡೆಸಲಾಗಿದ್ದು, ಒಟ್ಟು 45 ಕೆಜಿ ಹೈಡ್ರೋ ಗಾಂಜಾ, 6 ಕೆಜಿ ಸೈಲೋಸಿಬಿನ್ ಅಣಬೆ ಸೀಜ್ ಮಾಡಲಾಗಿದೆ. ಮೂವರು ಆರೋಪಿಗಳನ್ನು ಬಂಧಿಸಿ 50 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದೆ.

ಥೈಲ್ಯಾಂಡ್ ನಿಂದ ಡ್ರಗ್ಸ್ ಸಾಗಾಟದ ಬಗ್ಗೆ ಎನ್‌.ಸಿ.ಬಿ. ಮಾಹಿತಿ ಸಂಗ್ರಹಿಸಿತ್ತು. ಮಾಹಿತಿಯಂತೆ ಅಕ್ಟೋಬರ್ 9ರಂದು ಕೊಲಂಬೋದಿಂದ ಬರುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಇಬ್ಬರಿಂದ 31 ಕೆಜಿ ಹೈಡ್ರೋ ಗಾಂಜಾ, 4 ಕೆಜಿ ಸೈಲೋಸಿಬಿನ್ ಅಣಬೆಯನ್ನು ಸೀಜ್ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಬ್ಬರ ವಿಚಾರಣೆಯ ವೇಳೆ ಹ್ಯಾಂಡ್ಲರ್ ಶ್ರೀಲಂಕಾದಿಂದ ಬರುವ ಮಾಹಿತಿ ಸಿಕ್ಕಿದೆ. ಅದರಂತೆ ಕಾದು ಶ್ರೀಲಂಕಾ ಪ್ರಜೆಯನ್ನು ಕೂಡ ಅಧಿಕಾರಿಗಳು ಬಂಧಿಸಿದ್ದಾರೆ. ಹ್ಯಾಂಡ್ಲರ್ ನಿಂದ 14 ಹೈಡ್ರೋ ಗಾಂಜಾ 2 ಕೆಜಿ ಸೈಲೋಸಿಬಿನ್ ಅಣಬೆಯನ್ನು ವಶಕ್ಕೆ ಪಡೆಯಲಾಗಿದೆ. 250 ಫುಡ್ ಟಿನ್ ಗಳಲ್ಲಿ ಡ್ರಗ್ಸ್ ಸೀಲ್ ಮಾಡಿ ಆರೋಪಿಗಳು ತಂದಿದ್ದರು.

ಒಟ್ಟು 45 ಕೆಜಿ ಹೈಡ್ರೋಗಾಂಜಾ, 6 ಕೆಜಿ ಸೈಲೋಸಿಬಿನ್ ವಶಕ್ಕೆ ಪಡೆಯಲಾಗಿದೆ. 18 ಕೇಸ್ ಗಳಲ್ಲಿ ಮಾದಕ ವಸ್ತುಗಳನ್ನು ಬೆಂಗಳೂರು ಎನ್.ಸಿ.ಬಿ. ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಈ ವರ್ಷ 100 ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶಕ್ಕೆ ಪಡೆಯಲಾಗಿದೆ. 18 ಪ್ರಕರಣಗಳಲ್ಲಿ 45 ಆರೋಪಿಗಳನ್ನು ಬಂಧಿಸಲಾಗಿದೆ. ಕೇರಳ, ರಾಜಸ್ಥಾನ, ಗುಜರಾತ್, ಮಹಾರಾಷ್ಟ್ರದಲ್ಲಿ ದಂಧೆ ನಡೆಯುತ್ತಿತ್ತು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular