ನವದೆಹಲಿ: ಉಪರಾಷ್ಟ್ರಪತಿ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಸಿ.ಪಿ. ರಾಧಾಕೃಷ್ಣನ್ 452 ಮತ ಪಡೆದು ಆಯ್ಕೆಯಾಗಿದ್ದಾರೆ. ಸುದರ್ಶನ್ ರೆಡ್ಡಿ 300 ಮತಗಳನ್ನು ಪಡೆದುಕೊಂಡಿದ್ದಾರೆ.
ಭಾರತದ ನೂತನ ಉಪರಾಷ್ಟ್ರಪತಿಯಾಗಿ ಸಿ.ಪಿ. ರಾಧಾಕೃಷ್ಣನ್ ಆಯ್ಕೆಯಾಗಿದ್ದಾರೆ. ಎನ್.ಡಿ.ಎ. ಅಭ್ಯರ್ಥಿಯಾಗಿರುವ ಸಿ.ಪಿ. ರಾಧಾಕೃಷ್ಣನ್ ಗೆ 452 ಮತಗಳು ಬಂದಿವೆ. ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ 300 ಮತಗಳನ್ನು ಪಡೆದುಕೊಂಡಿದ್ದಾರೆ.
ಜಗದೀಪ್ ಧನಕರ್ ರಾಜೀನಾಮೆಯಿಂದ ತೆರವಾಗಿರುವ ಉಪರಾಷ್ಟ್ರಪತಿ ಸ್ಥಾನಕ್ಕೆ ಮಂಗಳವಾರ ಚುನಾವಣೆ ನಡೆದಿತ್ತು. ದೇಶದ ಎರಡನೇ ಅತ್ಯುನ್ನತ ಹುದ್ದೆಗೆ ಇಂದು ಮತದಾನ ನಡೆದಿದ್ದು, ಸಂಜೆ ನಂತರ ಫಲಿತಾಂಶ ಪ್ರಕಟವಾಗಿದೆ. ಈ ಚುನಾವಣೆಯಲ್ಲಿ ಸಂಸದರು ಮತ ಚಲಾಯಿಸುತ್ತಾರೆ.
NDA nominee and Maharashtra Governor C.P. Radhakrishnan elected as the Vice President of India with a total of 452 votes pic.twitter.com/ms7E1Nv17r
— ANI (@ANI) September 9, 2025