ಬೆಂಗಳೂರು: ಹೊಸಕೋಟೆಯಲ್ಲಿ ರಸ್ತೆ ಬದಿಯಲ್ಲಿ ನವಜಾತ ಶಿಶುವಿನ ಶವ ಪತ್ತೆಯಾಗಿದೆ. ಹೊಸಕೋಟೆ ನಗರದ ದೊಡ್ಡಕೆರೆ ಏರಿಯ ಬಳಿ ಘಟನೆ ನಡೆದಿದೆ.
ಹೆಣ್ಣು ಮಗು ಎಂದು ರಸ್ತೆ ಬದಿ ಬಿಸಾಕಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ನವಜಾತ ಶಿಶು ಶವವನ್ನು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಶಿಫ್ಟ್ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ನಗರದಲ್ಲಿ ಘಟನೆ ನಡೆದಿದೆ. ಹೊಸಕೋಟೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
