HomeLatest NewsBREAKING: ಮದುವೆಯಾದ 45 ದಿನಕ್ಕೇ ದುಡುಕಿದ ನವವಿವಾಹಿತ ಆತ್ಮಹತ್ಯೆ

BREAKING: ಮದುವೆಯಾದ 45 ದಿನಕ್ಕೇ ದುಡುಕಿದ ನವವಿವಾಹಿತ ಆತ್ಮಹತ್ಯೆ

ದಾವಣಗೆರೆ: ಮದುವೆಯಾದ 45 ದಿನಕ್ಕೆ ನವವಿವಾಹಿತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಾವಣಗೆರೆ ತಾಲೂಕಿನ ಗುಮ್ಮನೂರಿನಲ್ಲಿ ಘಟನೆ ನಡೆದಿದೆ.

ಹರೀಶ್(30) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ನನ್ನ ಸಾವಿಗೆ ಪತ್ನಿಯ ವರ್ತನೆ ಕಾರಣ ಎಂದು ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತನ್ನ ಪತ್ನಿಯ ನಡತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು, ಕಿರುಕುಳ ನೀಡುತ್ತಿದ್ದ ಆರೋಪ ಮಾಡಿದ್ದಾರೆ. ಪತ್ನಿ ಹಾಗೂ ಆಕೆಯ ತಂದೆ, ತಾಯಿ, ಚಿಕ್ಕಪ್ಪನಿಗೆ ಜೀವಾವಧಿ ಶಿಕ್ಷೆಯಾಗಲಿ. ಪತ್ನಿ ಕಿರುಕುಳ ನೀಡುತ್ತಿದ್ದಳು. ಆಕೆಯ ಸಂಬಂಧಿಕರಿಂದ ಜೀವ ಬೆದರಿಕೆ ಇತ್ತು, ಈ ಕಾರಣಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗುತ್ತಿದ್ದೇನೆ ಎಂದು ೆರಡು ಪುಟಗಳ ಡೆತ್ ನೋಟ್ ಬರೆದಿಟ್ಟಿದ್ದಾರೆ ಎನ್ನಲಾಗಿದ್ದು, ಘಟನಾ ಸ್ಥಳಕ್ಕೆ ದಾವಣಗೆರೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆತ್ಮಹತ್ಯೆ ತಡೆ ಸಹಾಯವಾಣಿ:

ಎಲ್ಲಾ ಸಮಸ್ಯೆಗಳಿಗೂ ಸಾವು ಪರಿಹಾರವಲ್ಲ. ಆತ್ಮಹತ್ಯೆ ತಡೆ ಸಹಾಯವಾಣಿ ಸಂಖ್ಯೆ (022)27546669

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular