HomeLatest NewsBREAKING: ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆ ಆತ್ಮಹತ್ಯೆ: ಗಂಡನಿಂದಲೇ ಕೊಲೆ ಆರೋಪ

BREAKING: ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆ ಆತ್ಮಹತ್ಯೆ: ಗಂಡನಿಂದಲೇ ಕೊಲೆ ಆರೋಪ

ಬೆಂಗಳೂರು: ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿಯ ಮನೆಯಲ್ಲೇ 23 ವರ್ಷದ ಅಮೂಲ್ಯ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಅಂದ್ರಹಳ್ಳಿಯ ವಿದ್ಯಾಮಾನ್ಯ ನಗರದಲ್ಲಿ ನಡೆದಿದೆ.

ಮದುವೆಯಾದ ಮೂರು ತಿಂಗಳಿಗೆ ಗಂಡನ ಮನೆಯಲ್ಲಿ ಅಮೂಲ್ಯ ನೇಣಿಗೆ ಶರಣಾಗಿದ್ದಾರೆ. ಅಮೂಲ್ಯ ಸಾವಿಗೆ ಪತಿ ಮನೆಯವರೇ ಕಾರಣ ಎಂದು ಕುಟುಂಬದವರು ಆರೋಪಿಸಿದ್ದಾರೆ.

ಅವಳ ಗಂಡನೇ ಕೊಲೆ ಮಾಡಿ ನೇಣಿಗೆ ಹಾಕಿದ್ದಾನೆ. ವರದಕ್ಷಿಣೆ ಕಿರುಕುಳ ನೀಡಿದ್ದಾನೆ ಎಂದು ನೇಣಿಗೆ ಶರಣಾಗಿರುವ ಅಮೂಲ್ಯ ತಾಯಿ ಸುನೀತಾ ಹೇಳಿದ್ದಾರೆ. ಗಂಡನಿಗೆ ಅನುಮಾನ, ಯಾರ ಜೊತೆಯೂ ಮಾತನಾಡಲು ಬಿಡುತ್ತಿರಲಿಲ್ಲ. ಅವರ ಮನೆಯವರು ನನ್ನ ಮಗಳಿಗೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಿದ್ದಾರೆ. ಸ್ಥಳಕ್ಕೆ ಬ್ಯಾಡರಹಳ್ಳಿ ಠಾಣೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular