ಚಿಕ್ಕಬಳ್ಳಾಪುರ: ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಭಾಗ್ಯನಗರ ತಾಲೂಕಿನ ಚಿಂಚಿಪಲ್ಲಿಯ ಸಮೀಪ ಘಟನೆ ನಡೆದಿದೆ.
ಚೆಂಚುರಾಯನಪಲ್ಲಿ ಗ್ರಾಮದ ವರ್ಷಿಣಿ ಮೃತಪಟ್ಟವರು ಎಂದು ಹೇಳಲಾಗಿದೆ. ಪತಿ ಸುರೇಂದ್ರ ಜೊತೆಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ ಗೆ ಸುರೇಂದ್ರ ಬೈಕ್ ಡಿಕ್ಕಿ ಹೊಡೆದಿದೆ.
ವರ್ಷಿಣಿ ಪತಿ ಸುರೇಂದ್ರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಕೇವಲ ಮೂರು ತಿಂಗಳ ಹಿಂದೆ ಪ್ರೀತಿಸಿ ವರ್ಷಿಣಿ -ಸುರೇಂದ್ರ ಮದುವೆಯಾಗಿದ್ದರು. ಭಾಗ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

