ವಿಶಾಖಪಟ್ಟಣ: ಆಂಧ್ರಪ್ರದೇಶದಲ್ಲಿ ಘೋರ ದುರಂತ ಸಂಭವಿಸಿದೆ. ದೇವರ ಉತ್ಸವದ ವೇಳೆ ಗೋಡೆ ಕುಸಿದು 7ಭಕ್ತರು ಮೃತಪಟ್ಟಿದ್ದು, ಹಲವು ಭಕ್ತರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಶಾಖಪಟ್ಟಣದ ವರಮಹಾಲಕ್ಷ್ಮಿ ನರಸಿಂಹಸ್ವಾಮಿ ದೇವಾಲಯದ ಚಂದನೋತ್ಸವದಲ್ಲಿ 20 ಅಡಿ ಉದ್ದದ ಗೋಡೆ ಕುಸಿದು ದುರಂತ ಸಂಭವಿಸಿದೆ. ಅವಘಡದಲ್ಲಿ 7 ಮಂದಿ ಮೃತಪಟ್ಟಿದ್ದಾರೆ. ಎಸ್.ಡಿ.ಆರ್.ಎಫ್. ಮತ್ತು ಎನ್.ಡಿ.ಆರ್.ಎಫ್.ನಿಂದ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ.
ಘಟನೆಯಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಘಟನೆ ವರದಿಯಾದ ತಕ್ಷಣ ನಾವು ಸ್ಥಳಕ್ಕೆ ತಲುಪಿದ್ದೇವೆ ಎಂದು ಎಸ್ಡಿಆರ್ಎಫ್ ಜವಾನರೊಬ್ಬರು ತಿಳಿಸಿದ್ದಾರೆ.
ಭಾರಿ ಮಳೆಯಿಂದಾಗಿ ಗೋಡೆ ಕುಸಿದು ದುರಂತ ಸಂಭವಿಸಿದೆ. ಹೊಸ ಶಾಪಿಂಗ್ ಕಾಂಪ್ಲೆಕ್ಸ್ ಸಮೀಪದ ಗೋಡೆ ಕುಸಿದು ದುರಂತ ಸಂಭವಿಸಿದೆ. ಸಿಂಹಾಚಲಂ ದೇವಾಲಯದ ಟಿಕೆಟ್ ಕೌಂಟರ್ ಮಾರ್ಗದಲ್ಲಿ ಘಟನೆ ನಡೆದಿದೆ. ದೇವಾಲಯ ಪ್ರವೇಶದ 300 ರೂ. ಟಿಕೆಟ್ ಕೌಂಟರ್ ಮಾರ್ಗದಲ್ಲಿ ಅವಘಡ ಸಂಭವಿಸಿದೆ. ಅವಶೇಷಗಳಡಿ ಇನ್ನೂ ಹಲವರು ಸಿಲುಕಿರುವ ಶಂಕೆ ಇದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
#WATCH | Andhra Pradesh | According to an SDRF jawan, "Seven people died in the incident. The injured have been sent to the hospital for treatment…We immediately reached the spot after the incident was reported…" https://t.co/jDfKZjnX1U pic.twitter.com/RqbiwqpID1
— ANI (@ANI) April 30, 2025
#WATCH | Andhra Pradesh | Visuals from the Sri Varahalakshmi Narasimha Swamy temple in Visakhapatnam, where seven people died after a 20-foot-long stretch collapsed during the Chandanotsavam festival pic.twitter.com/NYVIDsHGkV
— ANI (@ANI) April 30, 2025