ಬೆಂಗಳೂರು: ಕಾರವಾರ ಶಾಸಕ ಸತೀಶ್ ಸೈಲ್ ಅವರನ್ನು ಬಂಧಿಸಲಾಗಿದೆ. ಇಡಿ ಅಧಿಕಾರಿಗಳು ಸತೀಶ್ ಸೈಲ್ ಅವರನ್ನು ಬಂಧಿಸಿದ್ದಾರೆ.
ಇಡಿ ವಿಚಾರಣೆಗೆ ಆಗಮಿಸಿದ ಹಿನ್ನೆಲೆಯಲ್ಲಿ ಕಾರವಾರದಲ್ಲಿ ಸತೀಶ್ ಸೈಲ್ ಅವರನ್ನು ಬಂಧಿಸಲಾಗಿದೆ.
ಅಕ್ರಮ ಅದಿರು ಸಾಗಾಟ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ನಗದು ಸೇರಿದಂತೆ 14.13 ಕೋಟಿ ರೂಪಾಯಿ ಮೌಲ್ಯದ ಚಿನ್ನವನ್ನು ಜಪ್ತಿ ಮಾಡಲಾಗಿತ್ತು. ಆಗಸ್ಟ್ 13, 14ರಂದು ಇಡಿ ಅಧಿಕಾರಿಗಳು ದಾಳಿ ಮಾಡಿದ್ದರು.
ಕಾರವಾರ, ಗೋವಾ, ಮುಂಬೈ, ದೆಹಲಿಯಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಪ್ರಕರಣದ ವಿಚಾರಣೆಗೆ ಆಗಮಿಸದ ಹಿನ್ನೆಲೆಯಲ್ಲಿ ಶಾಸಕ ಸತೀಶ್ ಸೈಲ್ ಅವರನ್ನು ಬಂಧಿಸಲಾಗಿದೆ. ನ್ಯಾಯಾಧೀಶರ ಮುಂದೆ ಅವರನ್ನು ಹಾಜರುಪಡಿಸಲಾಗುವುದು. ಕೋಗಿಲು ಕ್ರಾಸ್ ನಲ್ಲಿರುವ ಮನೆಯಲ್ಲಿ ನ್ಯಾಯಾಧೀಶರ ಮುಂದೆ ಇಡಿ ಅಧಿಕಾರಿಗಳು ಹಾಜರುಪಡಿಸಲಿದ್ದಾರೆ.