Breaking News: ‘ಎನ್ ಸಿ ಪಿ’ ಅಧ್ಯಕ್ಷ ಶರದ್ ಪವಾರ್ ಗೆ ಕೊಲೆ ಬೆದರಿಕೆ ಕರೆ; ದೂರು ದಾಖಲು

‘ಎನ್ ಸಿ ಪಿ’ ಅಧ್ಯಕ್ಷ ಶರದ್ ಪವಾರ್ (Sharad Pawar) ಗೆ ಕೊಲೆ ಬೆದರಿಕೆ ಕರೆ ಒಡ್ಡಲಾಗಿದೆ ಎಂದು ಶರದ್ ಪವಾರ್ ಪುತ್ರಿ ಸುಪ್ರಿಯಾ ಸುಳೆ ಆರೋಪಿಸಿದ್ದಾರೆ.

ಅಪರಿಚಿತರು ನನ್ನ ತಂದೆಗೆ ಕೊಲೆ ಬೆದರಿಕೆ ಒಡ್ಡಿದ್ದಾರೆ. ನನ್ನ ಮೊಬೈಲ್ ಗೆ ವಾಟ್ಸಪ್ ಕರೆ ಮಾಡಿರುವ ಅಪರಿಚಿತ ವ್ಯಕ್ತಿ ಬೆದರಿಕೆಯೊಡ್ಡಿದ್ದಾರೆ. ಈ ಬಗ್ಗೆ ಮುಂಬೈ ಪೊಲೀಸರಿಗೆ ದೂರು ನೀಡಿದ್ದೇವೆ. ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಗೂ ಮಾಹಿತಿ ನೀಡಿದ್ದೇನೆ ಎಂದು ಹೇಳಿದ್ದಾರೆ.

ಘಟನೆ ಸಂಬಂಧ ಆರೋಪಿಗಳನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಬೇಕೆಂದು, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಈ ವಿಷಯದಲ್ಲಿ ಕಠಿಣ ಕ್ರಮ (Strict action)
ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read