HomeKarnatakaBreaking News : ಕೊಪ್ಪಳದಲ್ಲಿ ಕಲುಷಿತ ನೀರು ಸೇವನೆಗೆ ಮತ್ತೊಂದು ಬಲಿ; ಬಾಲಕಿ ಸಾವು

Breaking News : ಕೊಪ್ಪಳದಲ್ಲಿ ಕಲುಷಿತ ನೀರು ಸೇವನೆಗೆ ಮತ್ತೊಂದು ಬಲಿ; ಬಾಲಕಿ ಸಾವು

ಕೊಪ್ಪಳ : ಕೊಪ್ಪಳದಲ್ಲಿ ಕಲುಷಿತ ನೀರು (Contaminated water) ಸೇವನೆಗೆ ಮತ್ತೊಂದು ಬಲಿಯಾಗಿದ್ದು, ಕಲುಷಿತ ನೀರು ಸೇವಿಸಿ 10 ವರ್ಷದ ಬಾಲಕಿ ಮೃತಪಟ್ಟ ಘಟನೆ ಕೊಪ್ಪಳದ ಬಿಜಕಲ್ ಗ್ರಾಮದಲ್ಲಿ ನಡೆದಿದೆ.

ಬಿಜಕಲ್ ಗ್ರಾಮದ ನಿರ್ಮಲಾ (10) ಎಂಬ ಬಾಲಕಿ ಕಲುಷಿತ ನೀರು ಸೇವಿಸಿ ಮೃತಪಟ್ಟಿದ್ದಾಳೆ (dead) ಎನ್ನಲಾಗಿದೆ. ನಿನ್ನೆ ರಾತ್ರಿ ಬಾಲಕಿಗೆ ವಾಂತಿ, ಭೇದಿ ಕಾಣಿಸಿಕೊಂಡಿದ್ದು, ನಂತರ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಬಾಲಕಿ ಮೃತಪಟ್ಟಿದ್ದಾಳೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಲುಷಿತ ನೀರು ಸೇವನೆಯಿಂದಲೇ ಬಾಲಕಿ ಮೃತಪಟ್ಟಿದ್ದಾಳೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ಹಿನ್ನೆಲೆ ಜನಪ್ರತಿನಿಧಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಶುಚಿಕರವಾದ ನೀರು ಒದಗಿಸುವಂತೆ ಆಗ್ರಹಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular