ಅಮೆರಿಕಾ ಮೂಲದ ಸಂಶೋಧನಾ ಸಂಸ್ಥೆ ಹಿಂಡನ್ ಬರ್ಗ್ ವರದಿ ಬಳಿಕ ವಿಶ್ವ ಸಿರಿವಂತರ ಪಟ್ಟಿಯಲ್ಲಿ ಮೂರನೇ ಹಾಗೂ ಭಾರತದ ಸಿರಿವಂತರ ಪಟ್ಟಿಯಲ್ಲಿ ಮೊದಲನೇ ಸ್ಥಾನದಲ್ಲಿದ್ದ ಅದಾನಿ ಗ್ರೂಪ್ ಮುಖ್ಯಸ್ಥ ಗೌತಮ್ ಅದಾನಿ ಸಂಪತ್ತಿನಲ್ಲಿ ಇಳಿಕೆಯಾಗುತ್ತಲೇ ಇದೆ.
ಇದರ ಪರಿಣಾಮ ಗೌತಮ್ ಅದಾನಿ ಈಗ ವಿಶ್ವ ಸಿರಿವಂತರ ಪಟ್ಟಿಯಲ್ಲಿ ಮೂರನೇ ಸ್ಥಾನದಿಂದ 10ನೇ ಸ್ಥಾನಕ್ಕೆ ತಲುಪಿದ್ದು, ಅಲ್ಲದೆ ಭಾರತದ ಅತಿ ಸಿರಿವಂತರ ಪಟ್ಟಿಯಲ್ಲಿಯೂ ಎರಡನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ. ಇದೀಗ ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಈ ಮೊದಲಿನಂತೆ ಭಾರತದ ನಂಬರ್ 1 ಶ್ರೀಮಂತ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ವಿಶ್ವ ಸಿರಿವಂತರ ಪಟ್ಟಿಯಲ್ಲಿ ಮುಕೇಶ್ ಅಂಬಾನಿ 9 ನೇ ಸ್ಥಾನದಲ್ಲಿದ್ದಾರೆ.
ಅದಾನಿ ಸಮೂಹದ ಕಂಪನಿಗಳ ಷೇರುಗಳ ಬೆಲೆಯಲ್ಲಿ ನಿರಂತರ ಇಳಿಕೆ ಕಾಣುತ್ತಿದ್ದ ಪರಿಣಾಮ ಗೌತಮ್ ಅದಾನಿ ಹಾಗೂ ಮುಕೇಶ್ ಅಂಬಾನಿ ಅವರ ನಡುವೆ 18,000 ಕೋಟಿ ರೂಪಾಯಿಗಳ ವ್ಯತ್ಯಾಸವಿತ್ತು. ಇಂದು ಅದಾನಿಯವರ ಕಂಪನಿ ಷೇರು ಮತ್ತೆ ಇಳಿಕೆಯಾದ ಕಾರಣ ಮುಕೇಶ್ ಅಂಬಾನಿ ಭಾರತದ ನಂಬರ್ 1 ಶ್ರೀಮಂತ ಪಟ್ಟಕ್ಕೆ ಏರಿದ್ದಾರೆ.
https://twitter.com/ANI/status/1620667088426921985