ಬೆಂಗಳೂರು: ಗ್ರೇಟರ್ ಬೆಂಗಳೂರು ಐದು ವಿಭಾಗಗಳಾಗಿ ವಿಂಗಡಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರು ದಕ್ಷಿಣ ನಗರ ಪಾಲಿಕೆ, ಬೆಂಗಳೂರು ಉತ್ತರ ನಗರ ಪಾಲಿಕೆ, ಬೆಂಗಳೂರು ಪೂರ್ವ ನಗರ ಪಾಲಿಕೆ, ಬೆಂಗಳೂರು ಕೇಂದ್ರ ನಗರ ಪಾಲಿಕೆ, ಬೆಂಗಳೂರು ಪಶ್ಚಿಮ ನಗರ ಪಾಲಿಕೆಯಾಗಿ ರಾಜ್ಯ ಸರ್ಕಾರ ವಿಂಗಡಿಸಿದೆ.
ಐದು ಮಹಾನಗರ ಪಾಲಿಕೆಗಳ ಗಡಿ ಗುರುತು ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಪಾಲಿಕೆಯ ಕೇಂದ್ರ ಕಚೇರಿ ಜಿಬಿಎ ಕೇಂದ್ರ ಕಚೇರಿಯಾಗಿ ಮಾರ್ಪಾಡು ಮಾಡಲಾಗಿದೆ.
ಬಿಬಿಎಂಪಿ ಬದಲು ಜಿಬಿಎ ಜಾರಿಗೊಳಿಸಲು ಪ್ಲಾನ್ ಮಾಡಿಕೊಳ್ಳಲಾಗಿದೆ. ಆಗಸ್ಟ್ 11ರಂದು ಅಧಿವೇಶನದಲ್ಲಿ ಐದು ಮಹಾನಗರ ಪಾಲಿಕೆಗಳ ವಿಚಾರ ಚರ್ಚಿಸಲಾಗುವುದು. ಅಧಿವೇಶನದಲ್ಲಿ ಬಿಲ್ ಪಾಸ್ ಮಾಡಲು ರಾಜ್ಯ ಸರ್ಕಾರದಿಂದ ತಯಾರಿ ಮಾಡಿಕೊಳ್ಳಲಾಗಿದೆ. ವಿಭಾಗಗಳ ಬಗ್ಗೆ ಅಕ್ಷೇಪಣೆಗಳಿದ್ದಲ್ಲಿ ಸಲಹೆ ನೀಡಲು ಪಾಲಿಕೆ ಸೂಚನೆ ನೀಡಿದೆ. ಸಾರ್ವಜನಿಕರ ಸಲಹೆ ಪಡೆಯುವಂತೆ ಬಿಬಿಎಂಪಿ ಸೂಚನೆ ನೀಡಿದೆ.