BREAKING NEWS: ತುಮಕೂರಿನಲ್ಲಿ ಭೀಕರ ಅಪಘಾತ: ಕಂಟೈನರ್ ಗೆ ಬೈಕ್ ಡಿಕ್ಕಿ: ಮೂವರು ಸವಾರರು ಸಾವು

ತುಮಕೂರು: ನಂದಿಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಕಂಟೈನರ್ ಲಾರಿಗೆ ಬೈಕ್ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ್ದಾರೆ.

ತುಮಕೂರು ಗ್ರಾಮಾಂತರದ ಹಿರೇಹಳ್ಳಿ ಸಮೀಪದ ನಂದಿಹಳ್ಳಿ ಸಮೀಪ ಘಟನೆ ನಡೆದಿದೆ. ಬಂಕ್ ನಲ್ಲಿ ಡೀಸೆಲ್ ತುಂಬಿಸಿಕೊಂಡು ಬರುತ್ತಿದ್ದ ಲಾರಿ ಹೆದ್ದಾರಿಗೆ ಬರುತ್ತಿದ್ದಂತೆ ಬೈಕ್ ಡಿಕ್ಕಿ ಹೊಡೆದಿದೆ. ಬೈಕ್ ನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ. ತ್ರಿಬಲ್ ರೈಡ್ ಹೋಗುತ್ತಿದ್ದ ಬೈಕ್ ಸವಾರರು ಮೃತಪಟ್ಟಿದ್ದಾರೆ. ಕ್ಯಾತಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಎಎಸ್ಪಿ ಗೋಪಾಲ್, ಡಿವೈಎಸ್ಪಿ ಚಂದ್ರಶೇಖರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read