BREAKING NEWS: ತುಮಕೂರು ಗ್ರಾಮಾಂತರ ಶಾಸಕ ಬಿ.ಸಿ. ಗೌರಿಶಂಕರ್ ಆಯ್ಕೆ ಅಸಿಂಧು; ಚುನಾವಣಾ ಅಕ್ರಮದ ಹಿನ್ನೆಲೆಯಲ್ಲಿ ಆರು ವರ್ಷ ಅನರ್ಹತೆ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿಯೇ ತುಮಕೂರು ಗ್ರಾಮಾಂತರ ಶಾಸಕ ಬಿ.ಸಿ. ಗೌರಿಶಂಕರ್ ಅವರಿಗೆ ದೊಡ್ಡ ಹಿನ್ನಡೆಯಾಗಿದೆ. ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಿ.ಸಿ.ಗೌರಿಶಂಕರ್ ಅವರ ಆಯ್ಕೆಯನ್ನು ಅಸಿಂಧುಗೊಳಿಸಿ ಹೈಕೋರ್ಟ್ ಏಕಸದಸ್ಯಪೀಠ ಆದೇಶ ಹೊರಡಿಸಿದೆ.

ಶಾಸಕ ಗೌರಿಶಂಕರ್ ವಿರುದ್ಧ ಚುನಾವಣೆಯಲ್ಲಿ ಅಕ್ರಮ ನಡೆಸಿದ ಆರೋಪ ಕೆಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಬಿ.ಸಿ.ಗೌರಿಶಂಕರ್ ಅವರ ಆಯ್ಕೆಯನ್ನು ಅಸಿಂಧುಗೊಳಿಸಿ ಕಲಬುರ್ಗಿ ಪೀಠದ ನ್ಯಾ. ಸುನೀಲ್ ದತ್ ಯಾದವ್ ತೀರ್ಪು ನೀಡಿದ್ದಾರೆ.

ಅಲ್ಲದೆ ಚುನಾವಣಾ ಅಕ್ರಮದ ಕಾರಣಕ್ಕೆ ಮುಂದಿನ ಆರು ವರ್ಷಗಳ ಕಾಲ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಅನರ್ಹಗೊಳಿಸಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read