BREAKING NEWS: ದಿಢೀರ್‌ ರಾಜಕೀಯ ನಿವೃತ್ತಿ ಘೋಷಣೆ ಬಳಿಕ ಸುದ್ದಿಗೋಷ್ಟಿಯಲ್ಲಿ ಈಶ್ವರಪ್ಪ ಮಹತ್ವದ ಹೇಳಿಕೆ

ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗುವ ಮುನ್ನವೇ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ. ಈ ವಿಚಾರ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದು ಇದರ ಮಧ್ಯೆ ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಈಶ್ವರಪ್ಪ, ನಾನು ಯಾರದೇ ಒತ್ತಡದಿಂದ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿಲ್ಲ. ಸ್ವಯಂ ಆಗಿ ಈ ತೀರ್ಮಾನ ಕೈಗೊಂಡಿದ್ದೇನೆ ಎಂದು ಹೇಳಿದ್ದಾರಲ್ಲದೆ ಬಿಜೆಪಿ ವರಿಷ್ಠರು ನನ್ನ ಪತ್ರವನ್ನು ಪರಿಗಣಿಸುತ್ತಾರೆ ಎಂಬ ವಿಶ್ವಾಸವಿದೆ ಎಂದಿದ್ದಾರೆ.

ಪಕ್ಷ ಸಂಪೂರ್ಣ ಗೆಲುವು ಸಾಧಿಸಲು ನನ್ನ ಬೆಂಬಲವಿರುತ್ತದೆ ಎಂದು ಹೇಳಿದ ಈಶ್ವರಪ್ಪನವರು, ಈ ನಿಟ್ಟಿನಲ್ಲಿ ನೀಡುವ ಯಾವುದೇ ಜವಾಬ್ದಾರಿಯನ್ನು ತೆಗೆದುಕೊಳ್ಳುತ್ತೇನೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read