ನವದೆಹಲಿ: ಪಾಕಿಸ್ತಾನದ ಬಹವಾಲ್ಪುರದಲ್ಲಿ ಭಾರತ ನಡೆಸಿದ ದಾಳಿಯಲ್ಲಿ 30 ಜೈಶ್ ಭಯೋತ್ಪಾದಕರು ಸಾವನ್ನಪ್ಪಿದ್ದಾರೆ.
26 ಜನರ ಭೀಕರ ಪಹಲ್ಗಾಮ್ ಹತ್ಯಾಕಾಂಡಕ್ಕೆ ಪ್ರತೀಕಾರವಾಗಿ ಭಾರತ ‘ಆಪರೇಷನ್ ಸಿಂಧೂರ್’ ಹೆಸರಲ್ಲಿ ನಡೆಸಿದ ದಾಳಿಯಲ್ಲಿ ಕನಿಷ್ಠ 30 ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರು ಪಾಕಿಸ್ತಾನದ ಬಹವಾಲ್ಪುರದಲ್ಲಿ ಸಾವನ್ನಪ್ಪಿದ್ದಾರೆ. 26 ಜೀವಗಳನ್ನು ಬಲಿ ಪಡೆದ ಕ್ರೂರ ಪಹಲ್ಗಾಮ್ ಹತ್ಯಾಕಾಂಡಕ್ಕೆ ಪ್ರತಿಯಾಗಿ ಭಾರತ ಬುಧವಾರ ಮುಂಜಾನೆ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ ಒಂಬತ್ತು ಭಯೋತ್ಪಾದಕ ಸ್ಥಳಗಳನ್ನು ಗುರಿಯಾಗಿಸಿಕೊಂಡು ಕ್ಷಿಪಣಿ ದಾಳಿ ನಡೆಸಿದೆ.
ಭಾರತ ಗುರಿಯಿಟ್ಟುಕೊಂಡ ಒಂಬತ್ತು ಸ್ಥಳಗಳು ಬಹವಾಲ್ಪುರದಲ್ಲಿರುವ ಜೆಇಎಂ ಪ್ರಧಾನ ಕಚೇರಿ ಮತ್ತು ಮುರಿಡ್ಕೆಯಲ್ಲಿರುವ ಲಷ್ಕರ್-ಎ-ತೈಬಾ (ಎಲ್‌ಇಟಿ) ಆಗಿವೆ, ಇವೆರಡೂ ಪಾಕಿಸ್ತಾನದ ಪಂಜಾಬ್‌ನಲ್ಲಿವೆ.
ರಕ್ಷಣಾ ಸಚಿವಾಲಯ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ‘ಆಪರೇಷನ್ ಸಿಂಧೂರ್’ ನ ಭಾಗವಾಗಿ ಮಿಲಿಟರಿ ದಾಳಿಗಳನ್ನು ಬೆಳಗಿನ ಜಾವ 1:44 ಕ್ಕೆ ನಡೆಸಲಾಗಿದೆ ಎಂದು ತಿಳಿಸಿದೆ.
ಪಾಕಿಸ್ತಾನದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ಭಾರತ ‘ಆಪರೇಷನ್ ಸಿಂಧೂರ್’ ಅನ್ನು ಪ್ರಾರಂಭಿಸಿತು. ಭಾರತೀಯ ಸಶಸ್ತ್ರ ಪಡೆಗಳು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ‘ಆಪರೇಷನ್ ಸಿಂಧೂರ್’ ಅನ್ನು ಪ್ರಾರಂಭಿಸಿದೆ.
ಯಾವುದೇ ಪಾಕಿಸ್ತಾನಿ ಮಿಲಿಟರಿ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡಿಲ್ಲ. ಗುರಿಗಳ ಆಯ್ಕೆ ವಿಧಾನದಲ್ಲಿ ಭಾರತ ಗಣನೀಯ ಸಂಯಮವನ್ನು ಪ್ರದರ್ಶಿಸಿದೆ” ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.