HomeInternationalBREAKING NEWS: ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್ ಅರೆಸ್ಟ್

BREAKING NEWS: ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್ ಅರೆಸ್ಟ್

ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್ ರನ್ನು ಇಸ್ಲಾಮಾಬಾದ್ ನಲ್ಲಿ ಬಂಧಿಸಲಾಗಿದೆ. ಅವರನ್ನು ಅರೆಸೇನಾ ಪಡೆಗಳು ವಶಕ್ಕೆ ಪಡೆದಿವೆ ಎಂದು ಸ್ಥಳೀಯ ಜಿಯೋ ಟಿವಿ ವರದಿ ಮಾಡಿದೆ. ಭ್ರಷ್ಟಾಚಾರ ಪ್ರಕರಣದಲ್ಲಿ ಇಸ್ಲಾಮಾಬಾದ್‌ನ ಹೈಕೋರ್ಟ್ ನ್ಯಾಯಾಲಯದ ಆವರಣದಿಂದ ಇಮ್ರಾನ್ ಖಾನ್ ಅವರನ್ನು ಬಂಧಿಸಲಾಗಿದೆ.

ಇಮ್ರಾನ್ ಖಾನ್ ಅವರ ಕಾರನ್ನು ಸುತ್ತುವರಿದಿರುವ ವಿಡಿಯೋಗಳು ಹರಿದಾಡ್ತಿವೆ. ಬಂಧನ ವೇಳೆ ಇಮ್ರಾನ್ ಪರ ವಕೀಲರಿಗೆ ಗಂಭೀರ ಗಾಯಗಳಾಗಿವೆ.

ತಮ್ಮ ವಿರುದ್ಧದ ಭ್ರಷ್ಟಾಚಾರ ಮತ್ತು ಇತರೆ ಪ್ರಕರಣಗಳಲ್ಲಿ ಜಾಮೀನು ಪಡೆದುಕೊಳ್ಳುವ ಸಲುವಾಗಿ ಇಮ್ರಾನ್‌ ಖಾನ್‌ ಇಸ್ಲಾಮಾಬಾದ್‌ ಹೈಕೋರ್ಟ್‌ಗೆ ತೆರಳಿದ್ದರು. ಪ್ರಧಾನಿ ಹುದ್ದೆಯಿಂದ ಕೆಳಗಿಳಿದ ದಿನದಿಂದಲೂ ಅವರು ಸರ್ಕಾರವನ್ನು ಟೀಕಿಸುವ ಮೂಲಕ ಕೆಂಗಣ್ಣಿಗೆ ಗುರಿಯಾಗಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular