ಶ್ರೀನಗರ: ಜಮ್ಮು ಕಾಶ್ಮೀರದ ಸಾಂಬಾ ಸೆಕ್ಟರ್ ನಲ್ಲಿ 7 ಭಯೋತ್ಪಾದಕರನ್ನು ಬಿಎಸ್ಎಫ್ ಹತ್ಯೆ ಮಾಡಿದೆ. ಭಾರತದೊಳಗೆ ನುಸುಳಲು ಯತ್ನಿಸಿದ್ದ 7 ಉಗ್ರರನ್ನು ಹತ್ಯೆ ಮಾಡಲಾಗಿದೆ.
ಪಾಕಿಸ್ತಾನ ಕಡೆಯಿಂದ ನಿರಂತರ ಗುಂಡಿನ ದಾಳಿ ಹಿನ್ನೆಲೆಯಲ್ಲಿ ಇದರ ಲಾಭ ಪಡೆದು ಭಾರತದ ಉಗ್ರರು ಪ್ರಯತ್ನ ನಡೆಸಿದ್ದರು. ಈ ವೇಳೆ ಗಡಿ ಭದ್ರತಾ ಪಡೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಅವರನ್ನು ತಟಸ್ಥಗೊಳಿಸಿದ್ದಾರೆ.
ಜಮ್ಮುವಿನ ಸಾಂಬಾ ಜಿಲ್ಲೆಯಲ್ಲಿ ಗಡಿ ನುಸುಳುವಿಕೆ ಯತ್ನ ವಿಫಲಗೊಳಿಸಿದ ಬಿಎಸ್‌ಎಫ್ ನಿಂದ 7 ಉಗ್ರರನ್ನು ಹತ್ಯೆ ಮಾಡಲಾಗಿದೆ.
ಭಾರತ-ಪಾಕಿಸ್ತಾನದ ಉದ್ವಿಗ್ನತೆಯ ನಡುವೆಯೂ ಭಾರತೀಯ ಸೇನೆಯು ಪಾಕಿಸ್ತಾನದ ಪ್ರತಿಯೊಂದು ನೀಚ ಕೃತ್ಯಕ್ಕೂ ಬಲವಾದ ಪ್ರತಿಕ್ರಿಯೆ ನೀಡಿದೆ. ಪಾಕಿಸ್ತಾನ ನಡೆಸಿದ ಡ್ರೋನ್ ಮತ್ತು ಕ್ಷಿಪಣಿ ದಾಳಿಗಳನ್ನು ಭಾರತೀಯ ರಕ್ಷಣಾ ವ್ಯವಸ್ಥೆಯು ಆಕಾಶದಲ್ಲಿಯೇ ನಾಶಪಡಿಸಿತು. ಏತನ್ಮಧ್ಯೆ, ಗುರುವಾರ ಜಮ್ಮುವಿನ ಸಾಂಬಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿಯಲ್ಲಿ ಬಿಎಸ್‌ಎಫ್ ಪ್ರಮುಖ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿತು.
ಅಂತಾರಾಷ್ಟ್ರೀಯ ಗಡಿಯಿಂದ ಸಾಂಬಾ ಸೆಕ್ಟರ್‌ನಲ್ಲಿ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸುವಲ್ಲಿ ಗಡಿ ಭದ್ರತಾ ಪಡೆ(ಬಿಎಸ್‌ಎಫ್) 7 ಭಯೋತ್ಪಾದಕರನ್ನು ಕೊಂದಿದೆ. 10-12 ಭಯೋತ್ಪಾದಕರು ಒಳನುಸುಳಲು ಯೋಜನೆ ರೂಪಿಸುತ್ತಿದ್ದರು. 7 ಮಂದಿ ಹತ್ಯೆಯಾದ ನಂತರ ಉಳಿದ ಭಯೋತ್ಪಾದಕರು ಪಾಕಿಸ್ತಾನದ ಕಡೆಗೆ ಪಲಾಯನ ಮಾಡಿದ್ದಾರೆ.