ಮಹಾರಾಷ್ಟ್ರದ ಪುಣೆ ಕ್ಷೇತ್ರದ ಬಿಜೆಪಿ ಸಂಸದ ಗಿರೀಶ್ ಬಾಪಟ್ ವಿಧಿವಶರಾಗಿದ್ದಾರೆ. ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಅವರು ಮುಂಬೈನ ದೀನಾನಾಥ್ ಮಂಗೇಶ್ಕರ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕಳೆದ ಕೆಲವು ತಿಂಗಳಿನಿಂದ ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದ 72 ವರ್ಷದ ಹಿರಿಯ ಬಿಜೆಪಿ ನಾಯಕರಾದ ಗಿರೀಶ್ ಬಾಪಟ್ ಡಯಾಲಿಸಿಸ್ ಗೆ ಒಳಗಾಗಿದ್ದರು.
ಅವರ ಆರೋಗ್ಯ ಸ್ಥಿತಿ ಬಿಗಡಾಯಿಸಿದ ಹಿನ್ನೆಲೆಯಲ್ಲಿ ಅವರನ್ನು ದೀನನಾಥ್ ಮಂಗೇಶ್ಕರ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ.
BJP MP from Pune City, Girish Bapat has passed away in Deenanath Mangeshkar hospital, says Pune BJP president Jagdish Mulik. https://t.co/MWoiWxjqcL
— ANI (@ANI) March 29, 2023