ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ರಸ್ತೆಬದಿ ನಿಲ್ಲಿಸಿದ್ದ ಎರಡು ಕ್ರೇನ್ ವಾಹನಗಳಿಗೆ ಬೆಂಕಿ ಬಿದ್ದಿರುವ ಘಟನೆ ಕಂಟೋನ್ಮೆಂಟ್ ರಸ್ತೆಯಲ್ಲಿ ನಡೆದಿದೆ.
ಮಿನಿ ಟೋಯಿಂಗ್ ವಾಹನಗಳಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ದು, ಎರಡು ವಾಹನಗಳು ನಡು ರಸ್ತೆಯಲ್ಲಿಯೇ ಧಗ ಧಗನೆ ಹೊತ್ತಿ ಉರಿದಿವೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ನಿರತರಾಗಿದ್ದಾರೆ.
ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.