ಹಾಸನ: ರಾಜ್ಯದಲ್ಲಿ ಕಡ್ಡಾಯ ಹೃದಯ ತಪಾಸಣೆಗೆ ಸರ್ಕಾರ ಚಿಂತನೆ ನಡೆಸಿದೆ. ಮಕ್ಕಳಿಂದ ಹಿಡಿದು ಪ್ರತಿಯೊಬ್ಬರಿಗೂ ಹೃದಯ ಕಡ್ಡಾಯ ತಪಾಸಣೆ ಮಾಡಲಾಗುವುದು ಎನ್ನಲಾಗಿದೆ.
ಹಾಸನದಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ, ಹೃದಯಾಘಾತದಿಂದ ಆಗುವ ಸಾವುಗಳನ್ನು ತಡೆಯಬೇಕು. ಮಕ್ಕಳಿಂದ ಹಿಡಿದು ಹಿರಿಯರವರೆಗೂ ಹೃದಯಘಾತದಿಂದ ಮೃತಪಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಭೇಟಿ ಮಾಡಿ ಬಂದಿದ್ದೇನೆ ಎಂದು ರಾಜಣ್ಣ ತಿಳಿಸಿದ್ದಾರೆ.
ಹಾಸನ ಜಿಲ್ಲೆಯಲ್ಲಿ ಒಬ್ಬರೇ ಹೃದ್ರೋಗ ತಜ್ಞರಿದ್ದಾರೆ. ಇನ್ನೂ ಮೂವರು ತಜ್ಞರ ನೇಮಕ ಮಾಡುವಂತೆ ಆರೋಗ್ಯ ಸಚಿವರಿಗೆ ಮನವಿ ಮಾಡಿದ್ದೇನೆ. ಹಾಸನದಲ್ಲಿ ಹೈಸ್ಕೂಲ್ ಮಕ್ಕಳಿಗೂ ಹೃದಯ ತಪಾಸಣೆ ನಡೆಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.