ಬೆಂಗಳೂರು : ರಾಜ್ಯ ಸರ್ಕಾರವು ಸೆ.22 ರಿಂದ ಆರಂಭಿಸಲು ನಿರ್ಧರಿಸಿದ್ದ ‘ಜಾತಿ ಗಣತಿ’ ರದ್ದುಪಡಿಸುವಂತೆ ಕೋರಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆಯಾಗಿದೆ.
ರಾಜ್ಯ ಸರ್ಕಾರ ತರಾತುರಿಯಲ್ಲಿ ಜಾತಿ ಗಣತಿ ನಡೆಸುತ್ತಿದೆ. ದಸರಾ ರಜೆಯಲ್ಲಿ ಅದರಲ್ಲೂ ಜನರು ಹಬ್ಬ, ಕೃಷಿ ಚಟುವಟಿಕೆಯಲ್ಲಿ ಭಾಗಿಯಾಗಿರುವಾಗ ಜಾತಿ ಗಣತಿ ನಡೆಸುತ್ತಿದೆ. ಇದು ಸರಿಯಲ್ಲ.ರಾಜ್ಯ ಸರ್ಕಾರ ಜಾತಿ ಗಣತಿಗೆ ಹೊಸ ಉಪಜಾತಿಗಳನ್ನು ಸೃಷ್ಟಿ ಮಾಡಿದೆ, ಜಾತಿ ಹಾಗೂ ಉಪಜಾತಿಗಳ ನಡುವೆ ಎತ್ತಿ ಕಟ್ಟುವ ಕೆಲಸ ಮಾಡಿದೆ ಎಂದು ಆರೋಪಿಸಲಾಗಿದೆ. ವಕೀಲ ಕೆ.ಎನ್ ಸುಬ್ಬಾರೆಡ್ಡಿ ಮತ್ತಿತರರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.ಜಾತಿ ಗಣತಿ ನಡೆಸುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಮಾತ್ರವಿದೆ. ಹೀಗಾಗಿ ರಾಜ್ಯ ಸರ್ಕಾರದ ನಿರ್ಧಾರ ರದ್ದುಪಡಿಸುವಂತೆ ಕೋರಿ ಅರ್ಜಿ ಸಲ್ಲಿಸಲಾಗಿದೆ.
ಸೆ.22 ರಿಂದ ಅ.7 ರವರೆಗೆ ಹೊಸದಾಗಿ ಜಾತಿ ಗಣತಿ ನಡೆಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ. ಸೆ.22 ರಿಂದ ಅ.7 ರವರೆಗೆ ಸಮೀಕ್ಷೆ ನಡೆಯಲಿದೆ. ಶಿಕ್ಷಕರನ್ನು ಬಳಸಿಕೊಂಡು ಸಮೀಕ್ಷೆ ನಡೆಸುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.