ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾಲುವೆಯಲ್ಲಿ ಮೀನು ಹಿಡಿಯಲು ಹೋಗಿದ್ದ 5 ಮಕ್ಕಳು ನಾಪತ್ತೆಯಾಗಿದ್ದಾರೆ.
ನಾಪತ್ತೆಯಾದ ಮಕ್ಕಳಿಗಾಗಿ ಅಗ್ನಿಶಾಮಕದಳ ಸಿಬ್ಬಂದಿ, ಪೊಲೀಸರು, ಸ್ಥಳೀಯರು ಹುಡುಕಾಟ ನಡೆಸಿದ್ದಾರೆ.
ಕುಮಾರಿ ನಾರಾಯಣಪುರ ಗ್ರಾಮದ ಬಳಿ ಕಾಲುವೆಯಲ್ಲಿ ಮೀನು ಹಿಡಿಯಲು ಹೋಗಿದ್ದ ಮಕ್ಕಳು ನಾಪತ್ತೆಯಾಗಿದ್ದಾರೆ. ಧನುಷ್(14), ಚರಣ್(10), ಲೋಹಿತ್(12), ಲಕ್ಷ್ಮೀಶ್(12) ಸೇರಿ 5 ಮಕ್ಕಳು ನಾಪತ್ತೆಯಾಗಿದ್ದಾರೆ. ಭದ್ರಾವತಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೋಷಕರಲ್ಲಿ ಆತಂಕ ಹೆಚ್ಚಾಗಿದೆ.