ಬೆಂಗಳೂರು: ಕೋವಿಡ್ ಪಾಸಿಟಿವ್ ಸೋಂಕಿತರು ಬೆಂಗಳೂರಿನಲ್ಲಿ ಹೆಚ್ಚಾಗಿ ಕಂಡುಬರುತ್ತಿದ್ದಾರೆ. ಕೋವಿಡ್ ಟೆಸ್ಟಿಂಗ್ ಕೂಡ ಬೆಂಗಳೂರಿನಲ್ಲಿ ಹೆಚ್ಚಿಸಲಾಗಿದೆ.
ಇಂದಿಗೆ ರಾಜ್ಯದಲ್ಲಿ ಒಟ್ಟು 80 ಕೋವಿಡ್ ಪಾಸಿಟಿವ್ ಸಕ್ರಿಯ ಪ್ರಕರಣಗಳು ಕಂಡುಬಂದಿದ್ದು, ಬೆಂಗಳೂರಿನಲ್ಲೇ 73 ಪ್ರಕರಣಗಳಿವೆ. ಎಲ್ಲಿಯೂ ಕೋವಿಡ್ ನಿಂದಾಗಿ ಸಾವು ಸಂಭವಿಸಿಲ್ಲ.
ಆರೋಗ್ಯ ಇಲಾಖೆ ಕೋವಿಡ್ ಪರಿಸ್ಥಿತಿಯನ್ನು ನಿಗಾ ವಹಿಸಿದ್ದು, ಹತೋಟಿಗೆ ತರಲು ಕ್ರಮಗಳನ್ನ ಕೈಗೊಳ್ಳುತ್ತಿದೆ. ಆತಂಕ ಪಡುವ ಪರಿಸ್ಥಿತಿ ಬಂದಿಲ್ಲವಾದರೂ, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದ್ದಾರೆ.
