ಬೆಂಗಳೂರು: ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ನಾಪತ್ತೆ ಪ್ರಕರಣವನ್ನು ಎಸ್ಐಟಿಗೆ ಹಸ್ತಾಂತರ ಮಾಡಲಾಗಿದೆ. ಪ್ರಕರಣವನ್ನು ಅಧಿಕೃತವಾಗಿ ಎಸ್ಐಟಿ ತನಿಖೆಗೆ ಹಸ್ತಾಂತರ ಮಾಡಿ ಆದೇಶ ಹೊರಡಿಸಲಾಗಿದೆ.
ಡಿಜಿ ಐಜಿಪಿ ಆದೇಶದ ಮೇರೆಗೆ ಪ್ರಕರಣವನ್ನು ಎಸ್ಐಟಿಗೆ ಹಸ್ತಾಂತರ ಮಾಡಲಾಗಿದೆ. 2003ರಲ್ಲಿ ಧರ್ಮಸ್ಥಳದಲ್ಲಿ ಅನನ್ಯ ಭಟ್ ಕಾಣೆಯಾಗಿದ್ದ ಬಗ್ಗೆ ದೂರು ಸಲ್ಲಿಕೆಯಾಗಿತ್ತು. ಧರ್ಮಸ್ಥಳ ಪೊಲೀಸ್ ಠಾಣೆಗೆ ಸುಜಾತ ಭಟ್ ದೂರು ನೀಡಿದ್ದರು. ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ನಾಪತ್ತೆ ಪ್ರಕರಣವನ್ನು ಇದೀಗ ಅಧಿಕೃತವಾಗಿ ಎಸ್ಐಟಿಗೆ ಹಸ್ತಾಂತರ ಮಾಡಿ ಆದೇಶ ಹೊರಡಿಸಲಾಗಿದೆ. ಎಸ್ಐಟಿ ಪ್ರಕರಣದ ತನಿಖೆ ಕೈಗೊಳ್ಳಲಿದೆ.
ಧರ್ಮಸ್ಥಳದಲ್ಲಿ ನೂರಾರು ಶವ ಹೂಡಲಾಗಿದೆ ಎನ್ನುವ ಪ್ರಕರಣದ ನಡುವೆ ಧರ್ಮಸ್ಥಳದಲ್ಲಿ 2003ರಲ್ಲಿ ನನ್ನ ಪುತ್ರಿ ಅನನ್ಯ ಭಟ್ ನಾಪತ್ತೆಯಾಗಿದ್ದಾಳೆ ಎಂದು ಸುಜಾತ ಭಟ್ ಹೇಳಿಕೆ ನೀಡಿದ್ದರು. ತನ್ನ ಮಗಳು ಅನನ್ಯ ಭಟ್ ಅವರ ಫೋಟೋ ಎಂದು ಫೋಟೋ ಕೂಡ ಬಿಡುಗಡೆ ಮಾಡಿದ್ದರು. ಆದರೆ ಆ ಫೋಟೋ ವಾಸಂತಿ ಅವರದು ಎಂದು ಹೇಳಲಾಗಿದೆ.