ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಜನಾರ್ದನ ರೆಡ್ಡಿ ಅವರಿಗೆ 7 ವರ್ಷ ಶಿಕ್ಷೆ ಪ್ರಕಟವಾಗಿರುವ ಹಿನ್ನೆಲೆಯಲ್ಲಿ ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ.
ಸಿಬಿಐ ವಿಶೇಷ ಕೋರ್ಟ್ ನಿಂದ ಶಿಕ್ಷೆಗೆ ಒಳಗಾಗಿರುವ ಹಿನ್ನೆಲೆಯಲ್ಲಿ ಶಾಸಕ ಸ್ಥಾನದಿಂದ ಜನಾರ್ದನ ರೆಡ್ಡಿಯನ್ನು ಅನರ್ಹಗೊಳಿಸಲಾಗಿದೆ. ಮುಂದಿನ ಆರು ವರ್ಷಗಳ ಅವಧಿಗೆ ಕೊಪ್ಪಳ ಜಿಲ್ಲೆಯ ಗಂಗಾವತಿ ಶಾಸಕರಾಗಿದ್ದ ಜನಾರ್ದನ ರೆಡ್ಡಿಯನ್ನು ಅನರ್ಹಗೊಳಿಸಲಾಗಿದೆ. ಶಾಸಕ ಸ್ಥಾನದಿಂದ ಜನಾರ್ದನ ರೆಡ್ಡಿ ಅನರ್ಹಗೊಂಡಿದ್ದಾರೆ. ಅವರ ಶಾಸಕ ಸ್ಥಾನ ರದ್ದಾದ ಹಿನ್ನೆಲೆಯಲ್ಲಿ ಗಂಗಾವತಿ ವಿಧಾನಸಭಾ ಕ್ಷೇತ್ರ ತೆರವಾಗಿದೆ.
ವಿಧಾನಸಭೆಯ ಕಾರ್ಯದರ್ಶಿ ವಿಶಾಲಾಕ್ಷಿ ಈ ಬಗ್ಗೆ ಆದೇಶ ಹೊರಡಿಸಿದ್ದು, ಮೇ 6 ರಿಂದ ಜಾರಿಗೆ ಬರುವಂತೆ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಈ ಅನರ್ಹತೆ ಜನಾರ್ದನ ರೆಡ್ಡಿ ಶಿಕ್ಷೆ ಮುಗಿಸಿ ಬರುವವರೆಗೆ ಅಥವಾ ಶಿಕ್ಷೆಗೆ ಕೋರ್ಟ್ ತಡೆ ನೀಡುವವರೆಗೆ ಇರುತ್ತದೆ. ನಿಯಮದ ಪ್ರಕಾರ ಯಾವುದೇ ಶಾಸಕ ಅಥವಾ ಸಂಸದ ಎರಡು ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟು ಶಿಕ್ಷೆಗೆ ಗುರಿಯಾದರೆ ಅವರ ಸ್ಥಾನ ರದ್ದಾಗುತ್ತದೆ.