HomeKarnatakaBREAKING NEWS: ಬಳ್ಳಾರಿ 88ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಕನ್ನಡಕ್ಕೆ ಮೊದಲ ಬೂಕರ್ ಪ್ರಶಸ್ತಿ ತಂದ...

BREAKING NEWS: ಬಳ್ಳಾರಿ 88ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಕನ್ನಡಕ್ಕೆ ಮೊದಲ ಬೂಕರ್ ಪ್ರಶಸ್ತಿ ತಂದ ಸಾಹಿತಿ ಬಾನುಮುಷ್ತಾಕ್ ಆಯ್ಕೆ

ಬಳ್ಳಾರಿ: 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಸಾಹಿತಿ ಡಾ. ಬಾನುಮಸ್ತಾಕ್ ಅವರನ್ನು ಆಯ್ಕೆ ಮಾಡಲಾಗಿದೆ.

ಹೌದು, ಡಿಸೆಂಬರ್ ನಲ್ಲಿ ಬಳ್ಳಾರಿಯಲ್ಲಿ ನಡೆಯಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ ಹಾಗೂ ಅಂತರಾಷ್ಟ್ರೀಯ ಮಟ್ಟದ ಬೂಕರ್ ಪ್ರಶಸ್ತಿ ಪುರಸ್ಕೃತರಾದ ಬಾನುಮುಷ್ಕಾಕ್ ಅವರನ್ನು ಆಯ್ಕೆ ಮಾಡಲಾಗಿದೆ.

ಭಾನುವಾರ ಬಳ್ಳಾರಿಯಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾನುಮಸ್ತಾಕ್ ಅವರ ಹೆಸರನ್ನು ಘೋಷಣೆ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮಹೇಶ್ ಜೋಶಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಮ್ಮೇಳನ ಅಧ್ಯಕ್ಷರಾಗಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ. ಸಮ್ಮೇಳನದ ದಿನಾಂಕ ಇನ್ನೂ ನಿಗದಿಯಾಗಿಲ್ಲ. ಆರು ತಿಂಗಳ ಮೊದಲೇ ಅಧ್ಯಕ್ಷರನ್ನು ಘೋಷಿಸುವ ಕನ್ನಡ ಸಾಹಿತ್ಯ ಪರಿಷತ್ ನಡೆಗೆ ಆಕ್ಷೇಪ ಕೂಡ ವ್ಯಕ್ತವಾಗಿತ್ತು.

ಈ ಬಾರಿಯ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಆಯ್ಕೆ ಕನ್ನಡ ಸಾಹಿತ್ಯ ಪರಿಷತ್ ಇತಿಹಾಸದಲ್ಲಿಯೇ ಹೊಸ ಪರಂಪರೆಗೆ ನಾಂದಿ ಹಾಡಿದಂತಾಗಿದೆ. ಸಮ್ಮೇಳನ ನಡೆಯುವ ಸ್ಥಳ ಮತ್ತು ದಿನಾಂಕ ಅಂತಿಮವಾಗಿಲ್ಲ. ಸ್ವಾಗತ ಸಮಿತಿ ರಚನೆಯಾಗಿಲ್ಲ. ಸರ್ಕಾರದಿಂದ ಅನುದಾನ ಕೂಡ ಖಾತ್ರಿಯಾಗಿಲ್ಲ. ಬಳ್ಳಾರಿಯಲ್ಲಿ ಡಿಸೆಂಬರ್ ನಲ್ಲಿ ಸಮ್ಮೇಳನ ನಡೆಸಲು ನಿರ್ಧರಿಸಲಾಗಿದ್ದರೂ ಸ್ಥಳ, ದಿನಾಂಕ, ಸಮಿತಿಗಳ ಬಗ್ಗೆ ನಿರ್ಧಾರವಾಗಿಲ್ಲ. ಆದಕ್ಕೂ ಮೊದಲೇ ಸಮ್ಮೇಳನಾಧ್ಯಕ್ಷರನ್ನು ನೇಮಕ ಮಾಡಲಾಗಿದೆ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular