HomeCrimeBREAKING NEWS: ಭೀಮಾ ತೀರದಲ್ಲಿ ಮತ್ತೆ ಹರಿದ ನೆತ್ತರು: 6 ಜನರ ಬರ್ಬರ ಹತ್ಯೆ

BREAKING NEWS: ಭೀಮಾ ತೀರದಲ್ಲಿ ಮತ್ತೆ ಹರಿದ ನೆತ್ತರು: 6 ಜನರ ಬರ್ಬರ ಹತ್ಯೆ

ವಿಜಯಪುರ: ಭೀಮಾ ತೀರದಲ್ಲಿ ಮತ್ತೆ ನೆತ್ತರು ಹರಿದಿದೆ. ಆಸ್ತಿ ವಿವಾದದ ಕಾರಣಕ್ಕೆ ಆರು ಜನರನ್ನು ಮಾರಕಸ್ತ್ರಗಳಿಂದ ಕೊಚ್ಚಿ, ಗುಂಡು ಹಾರಿಸಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ವಿಜಯಪುರ ಜಿಲ್ಲೆ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ನಡೆದಿದೆ.

ನಿರಾಳೆ ಮತ್ತು ಕೊಳಗಿ ಕುಟುಂಬಗಳ ನಡುವೆ ಜಮೀನು ವಿವಾದವಿತ್ತು. ಇದೇ ಕಾರಣಕ್ಕೆ ಗಲಾಟೆಯಾಗಿ ಹತ್ಯೆ ನಡೆದಿದೆ. ರೇವಣಸಿದ್ದಪ್ಪ ನಿರಾಳೆ, ದುಂಡಪ್ಪ ರೇವಣಸಿದ್ದಪ್ಪ ನಿರಾಳೆ, ಶಿವಪುತ್ರ ರೇವಣಸಿದ್ದಪ್ಪ ನಿರಾಳೆ, ಚಂದ್ರಶೇಖರ ನಿರಾಳೆ, ಶಬ್ಬೀರ್ ನದಾಫ್ ಹತ್ಯೆಯಾದವರು ಎಂದು ಹೇಳಲಾಗಿದೆ.

ನಿರಾಳೆ ಕುಟುಂಬದ ಆರು ಜನರನ್ನು ಗುಂಡಿಕ್ಕಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಎಸ್ಪಿ ಲಕ್ಷ್ಮಣ ನಿಂಬರಗಿ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular