ಬೆಂಗಳೂರು: ಅನಧಿಕೃತ ಕಟ್ಟಡ ನಿರ್ಮಿಸಿದವರಿಗೆ ಕೆಇಆರ್‌ಸಿ ಶಾಕ್ ನೀಡಿದೆ. ಅನಧಿಕೃತ ಕಟ್ಟಡಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ಆದೇಶಿಸಲಾಗಿದೆ.
2024ರ ಡಿಸೆಂಬರ್ 17ರ ಸುಪ್ರೀಂ ಕೋರ್ಟ್ ಆದೇಶದಂತೆ ಕ್ರಮ ಕೈಗೊಳ್ಳಲಾಗಿದ್ದು, ಬಾಬುಸಪಾಳ್ಯದ ಕಟ್ಟಡ ಕುಸಿತ ದುರಂತದ ನಂತರ ನಿಗಾ ವಹಿಸಲಾಗಿತ್ತು. ಅನಧಿಕೃತ ಕಟ್ಟಡಗಳ ವಿದ್ಯುತ್ ಸಂಪರ್ಕ ಕಡಿತಕ್ಕೆ ಸೂಚನೆ ನೀಡಲಾಗಿದೆ.
ಸುಪ್ರೀಂ ಕೋರ್ಟ್ ಆದೇಶ ಪಾಲಿಸಲು ಸೂಚಿಸಿ ಸುತ್ತೋಲೆ ಹೊರಡಿಸಲಾಗಿದೆ. ಎಲ್ಲಾ ಇಲಾಖೆಗಳಿಗೆ ಕೆ.ಇ.ಆರ್.ಸಿ. ವತಿಯಿಂದ ಸುತ್ತೋಲೆ ನೀಡಲಾಗಿದೆ. ಈ ಕುರಿತಾಗಿ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.