ಬೆಂಗಳೂರು: ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ವಿಧಿವಶರಾಗಿದ್ದಾರೆ.
ಬೆಂಗಳೂರಿನ ಕೆಂಗೇರಿಯಲ್ಲಿರುವ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಾಹಿತಿ ತಿಳಿದ ಭಕ್ತರು ಅಂತಿಮ ದರ್ಶನಕ್ಕೆ ಆಗಮಿಸಿದ್ದಾರೆ.
ಕೆಂಗೇರಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಚಂದ್ರಶೇಖರನಾಥ ಮಹಾ ಸ್ವಾಮೀಜಿ ತಡರಾತ್ರಿ 12.01 ಗಂಟೆಗೆ ಶ್ರೀ ಕ್ಷೇತ್ರದಲ್ಲಿ ಭೈರವೈಕ್ಯರಾಗಿದ್ದಾರೆ. ಕೆಂಗೇರಿಯಲ್ಲಿ ಶ್ರೀಮಠ ಸ್ಥಾಪಿಸಿದ್ದ ಅವರು ಧಾರ್ಮಿಕ, ಆಧ್ಯಾತ್ಮಿಕ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಮಧ್ಯಾಹ್ನ 3 ಗಂಟೆಗೆ ವಿವಿಧ ಮಠಾಧೀಶರು, ಗಣ್ಯರು, ಭಕ್ತರ ಸಮ್ಮುಖದಲ್ಲಿ ಅಂತಿಮ ವಿಧಿ ವಿಧಾನ ನೆರವೇರಿಸಲಾಗುವುದು. ಶ್ರೀಗಳ ಉತ್ತರಾಧಿಕಾರಿ ಪೀಠಾಧ್ಯಕ್ಷರಾದ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ವಿಧಿ ವಿಧಾನ ನೆರವೇರಿಸುವರು.