ಹಾಸನ: ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ವಿಚಾರ ಕುರಿತಾಗಿ ಹಾಸನ ತಾಲೂಕಿನ ಕುಂದೂರಿನಲ್ಲಿ ನಿರ್ಮಲಾನಂದನಾಥ ಶ್ರೀಗಳು ಮಾತನಾಡಿದ್ದಾರೆ.
ಡಿಕೆ ಮುಖ್ಯಮಂತ್ರಿ ಆಗಬೇಕೆಂಬ ಬಗ್ಗೆ ಚರ್ಚೆ ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ನಮ್ಮ ಮಠ ಸಹಜವಾಗಿ ಒಕ್ಕಲಿಗ ಸಮುದಾಯದ ಶ್ರದ್ಧಾ ಕೇಂದ್ರವಾಗಿದೆ. ಡಿ.ಕೆ. ಶಿವಕುಮಾರ್ ಅವರು ಸದ್ಯ ಉಪಮುಖ್ಯಮಂತ್ರಿಯಾಗಿದ್ದಾರೆ. ಸಿಎಂ ಕುರ್ಚಿ ವಿಚಾರಕ್ಕೆ ಸಂಬಂಧಿಸಿದಂತೆ ಡಿ.ಕೆ. ಶಿವಕುಮಾರ್ ಅವರು ನಮ್ಮ ಜೊತೆ ಚರ್ಚೆ ನಡೆಸಿಲ್ಲ. ಸದ್ಯದ ಬೆಳವಣಿಗೆ ನೋಡಿ ಭಕ್ತರು ನಮ್ಮ ಜೊತೆ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಎಲ್ಲಾ ಪಕ್ಷಗಳಿಗೂ ಸಾಕಷ್ಟು ನಾಯಕರನ್ನು ನಮ್ಮ ಮಠ ಕೊಟ್ಟಿದೆ. ಎರಡೂವರೆ ವರ್ಷದ ನಂತರ ಅವಕಾಶ ಸಿಗುತ್ತದೆ ಎನ್ನುವ ಭರವಸೆ ಇತ್ತು. ಆದರೆ ಅದು ಆಗುವ ಹಾಗೆ ಕಾಣುತ್ತಿಲ್ಲ ಎಂದು ಭಕ್ತರಿಂದ ಆತಂಕವಿದೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ ಎಂದು ನಿರ್ಮಲಾನಂದನಾಥ ಶ್ರೀಗಳು ಹೇಳಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್ ಸರಿಯಾದ ನಿರ್ಧಾರ ತೆಗೆದುಕೊಳ್ಳಬೇಕು. ಪಕ್ಷಕ್ಕಾಗಿ ಶಿಸ್ತಿನ ಸಿಪಾಯಿಯಾಗಿ ಡಿ.ಕೆ. ಶಿವಕುಮಾರ್ ದುಡಿದಿದ್ದಾರೆ. ಅವರಿಗೆ ಅವಕಾಶ ಸಿಗಬೇಕು ಎನ್ನುವುದು ಎಲ್ಲರ ಕೋರಿಕೆಯಾಗಿದೆ. ಇನ್ನುಳಿದ ಅವಧಿಯನ್ನು ಡಿ.ಕೆ. ಶಿವಕುಮಾರ್ ಗೆ ಬಿಟ್ಟು ಕೊಡಬೇಕು ಎಂದು ಡಿಸಿಎಂ ಡಿಕೆ ಪರ ನಿರ್ಮಲಾನಂದನಾಥ ಸ್ವಾಮೀಜಿ ಬ್ಯಾಟ್ ಬೀಸಿದ್ದಾರೆ.
