ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದ ಐವರು ಆರೋಪಿಗಳು ಮತ್ತೆ ಜೈಲು ಸೇರಿದ್ದಾರೆ.
ಐವರು ಆರೋಪಿಗಳಿಗೆ ನ್ಯಾಯಾಧೀಶರು ನ್ಯಾಯಾಂಗ ಬಂಧನ ವಿಧಿಸಿದ್ದಾರೆ. ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದ ಎ1 ಪವಿತ್ರಾ ಗೌಡ, ಎ2 ದರ್ಶನ್, ಎ11 ನಾಗರಾಜು, ಎ12 ಲಕ್ಷ್ಮಣ, ಎ14 ಪ್ರದೋಶ್ ಜೈಲಿಗೆ ಕಳಿಸಲಾಗಿದೆ.
ನ್ಯಾಯಾಧೀಶರ ಆದೇಶದಂತೆ ಪೊಲೀಸರು ಜೈಲಿಗೆ ಕರೆದೊಯ್ದಿದ್ದಾರೆ. ಸಿಸಿಹೆಚ್ 64ರ ನ್ಯಾಯಾಧೀಶರಾದ ಈರಪ್ಪಣ್ಣ ಪವಡಿ ನಾಯ್ಕ್ ಅವರ ಆದೇಶದಂತೆ ಐವರು ಆರೋಪಿಗಳನ್ನು ಜೈಲಿಗೆ ಶಿಫ್ಟ್ ಮಾಡಲಾಗಿದೆ. ಪೊಲೀಸ್ ಭದ್ರತೆಯಲ್ಲಿ ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ಯಲಾಗಿದೆ.
ದರ್ಶನ್ ಮತ್ತು ಇತರೆ ಆರೋಪಿಗಳ ಜಾಮೀನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದ್ದು, ತಕ್ಷಣವೇ ಆರೋಪಿಗಳನ್ನು ವಶಕ್ಕೆ ಪಡೆಯಲು ಸೂಚನೆ ನೀಡಿದ ಹಿನ್ನೆಲೆಯಲ್ಲಿ ಐವರನ್ನು ಪೊಲೀಸರು ಬಂಧಿಸಿದ್ದಾರೆ.